ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ: ಕಣಿವೆಗೆ ಉರುಳಿದ ಗೂಡ್ಸ್‌ ವಾಹನ: 18 ಜನ ಸಾವು

Published 20 ಮೇ 2024, 10:52 IST
Last Updated 20 ಮೇ 2024, 10:52 IST
ಅಕ್ಷರ ಗಾತ್ರ

ಛತ್ತೀಸಗಢ: ಛತ್ತೀಸಗಢದ ಕಬೀರ್‌ಧಾಮ್ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಮಿನಿ ಗೂಡ್ಸ್ ವಾಹನವೊಂದು ಕಂದಕಕ್ಕೆ ಉರುಳಿದ್ದರಿಂದ 18 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

‘ಕುಕ್ದೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಬಹಪಾನಿ ಗ್ರಾಮದ ಬಳಿಯ ಬಂಜಾರಿ ಘಾಟ್‌ನಲ್ಲಿ ಈ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ 12 ಮಹಿಳೆಯರು ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಂಬತ್ತು ಮಂದಿ ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳ ಪೈಕಿ  ಐವರು ಮಹಿಳೆಯರು ಚಿಕಿತ್ಸೆಗೆ ಸ್ಪಂದಿಸದೆಯೇ ಮೃತಪಟ್ಟಿದ್ದಾರೆ’ ಎಂದು ಕಬೀರ್‌ಧಾಮ್ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.

ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಛತ್ತೀಸಗಢ ಉಪಮುಖ್ಯಮಂತ್ರಿ ವಿಜಯ್‌ ಶರ್ಮಾ, ಸರ್ಕಾರದಿಂದ ಸಾಧ್ಯವಾದಷ್ಟು ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT