ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜನದಟ್ಟಣೆ ತಪ್ಪಿಸಲು ವಿಶೇಷ ರೈಲು ಓಡಿಸಿ: ಅಶ್ವಿನಿ ವೈಷ್ಣವ್‌

Published 14 ಜೂನ್ 2024, 16:33 IST
Last Updated 14 ಜೂನ್ 2024, 16:33 IST
ಅಕ್ಷರ ಗಾತ್ರ

ನವದೆಹಲಿ: ರೈಲುಗಳಲ್ಲಿನ ಜನದಟ್ಟಣೆಯನ್ನು ತ್ವರಿತವಾಗಿ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಶುಕ್ರವಾರ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ರೈಲ್ವೆ ಮಂಡಳಿ, ವಲಯಗಳು ಮತ್ತು ವಿಭಾಗಗಳ ಸದಸ್ಯರು ಹಾಗೂ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಸಚಿವರು ನಿಲ್ದಾಣಗಳು ಮತ್ತು ರೈಲುಗಳಲ್ಲಿ ಭದ್ರತೆ, ಸಮಯಪಾಲನೆ ಮತ್ತು ಸೇವೆಗಳನ್ನು ಪರಿಶೀಲಿಸಿದರು. 

ಜನದಟ್ಟಣೆ ತಪ್ಪಿಸಲು ಅಗತ್ಯವಿರುವೆಡೆ ವಿಶೇಷ ರೈಲುಗಳನ್ನು ಓಡಿಸುವಂತೆ ಸಚಿವರು ಸೂಚಿಸಿದರು. ಸುರಕ್ಷತೆ ಮತ್ತು ಮೂಲ ಸೌಕರ್ಯ ವಿಷಯದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಒತ್ತಿ ಹೇಳಿದರು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT