ಜಮ್ಮು: ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ನಡೆದ ಕಾಲ್ತುಳಿತಕ್ಕೆ ಕೆಲವು ಯುವಕರ ನಡುವಿನ ಸಣ್ಣ ಜಗಳವೇ ಕಾರಣವಾಗಿದೆ. 'ದುರಾದೃಷ್ಟವತಾಶ್' ಕಾಲ್ತುಳಿತದಲ್ಲಿ 12 ಜನರು ಮೃತಪಟ್ಟಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಶನಿವಾರ ತಿಳಿಸಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಘಟನೆ ಅತ್ಯಂತ ದುರದೃಷ್ಟಕರ. ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ವಲ್ಪ ಸಮಯದಲ್ಲೇ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಘಟನಾ ಸ್ಥಳದ ಪ್ರಾಥಮಿಕ ಮಾಹಿತಿ ಪ್ರಕಾರ, ಕೆಲವು ಯುವಕರ ನಡುವೆ ವಾಗ್ವಾದ ನಡೆದಿದೆ ಮತ್ತು ಕೆಲವೇ ಸೆಕೆಂಡುಗಳಲ್ಲಿ ನೂಕುನುಗ್ಗಲು ಉಂಟಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ:ವೈಷ್ಣೋ ದೇವಿ ಮಂದಿರದಲ್ಲಿ ಕಾಲ್ತುಳಿತ: 12 ಜನರ ಸಾವು, ಹಲವರಿಗೆ ಗಾಯ

'ಪೊಲೀಸರು ಮತ್ತು ಸ್ಥಳೀಯ ಆಡಳಿತದ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸಿದ್ದಾರೆ. ಕೂಡಲೇ ಪರಿಸ್ಥಿತಿಯನ್ನು ತಹಬದಿಗೆ ತರಲಾಗಿದೆ. ಆದರೆ, ಆ ಹೊತ್ತಿಗಾಗಲೇ ಹಾನಿ ಸಂಭವಿಸಿತ್ತು' ಎಂದು ಅವರು ಹೇಳಿದರು.

ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಘಟನೆಯಲ್ಲಿ ಸುಮಾರು 15 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು...

ವೈಷ್ಣೋ ದೇವಿ ಭವನದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ತಲಾ ₹12 ಲಕ್ಷ ಪರಿಹಾರ

ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತ: ಉನ್ನತ ಮಟ್ಟದ ತನಿಖೆಗೆ ಲೆ. ಗವರ್ನರ್ ಆದೇಶ

ವೈಷ್ಣೋ ದೇವಿ ದುರಂತ: ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ಕೋವಿಂದ್, ರಾಹುಲ್ ಸಂತಾಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.