ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜೋಧಪುರ: ಆಸ್ಪತ್ರೆ ಆವರಣದಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಆಸ್ಪತ್ರೆ ಮಾಜಿ ಉದ್ಯೋಗಿ ಸೇರಿ ಇಬ್ಬರ ವಶ, ವಿಚಾರಣೆ
Published 27 ಆಗಸ್ಟ್ 2024, 15:51 IST
Last Updated 27 ಆಗಸ್ಟ್ 2024, 15:51 IST
ಅಕ್ಷರ ಗಾತ್ರ

ಜೈಪುರ: ಜೋಧಪುರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣವು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದರು.

ಪ್ರಕರಣದ ಸಂಬಂಧ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದ ವ್ಯಕ್ತಿಯೂ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಬಾಲಕಿಯು ಭಾನುವಾರ ರಾತ್ರಿ (ಆಗಸ್ಟ್‌ 25) ಮಹಾತ್ಮ ಗಾಂಧಿ ಆಸ್ಪತ್ರೆ ಆವರಣದಲ್ಲಿ ಒಬ್ಬಳೇ ಓಡಾಡುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಆಕೆಯೊಂದಿಗೆ ಮಾತುಕತೆ ಆರಂಭಿಸಿದ್ದಾರೆ. ಬಳಿಕ ಆಸ್ಪತ್ರೆ ತ್ಯಾಜ್ಯ ಬಿಸಾಡುವ ಜಾಗಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿಸಿದರು.

ಕುಟುಂಬಸ್ಥರೊಂದಿಗೆ ಕೋಪಗೊಂಡು ಬಾಲಕಿ ಭಾನುವಾರ ಸಂಜೆ ಮನೆ ಬಿಟ್ಟು ಬಂದಿದ್ದಳು. ಬಳಿಕ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದರು.

ಸೋಮವಾರ ಆಸ್ಪತ್ರೆ ಆವರಣದಲ್ಲಿ  ಬಾಲಕಿ ಪತ್ತೆಯಾಗಿದ್ದಳು. ಆಕೆಯ ಬಟ್ಟೆ ಹರಿದಿತ್ತು, ತಲೆಗೂದಲು ಹರಡಿತ್ತು. ನಂತರ ಆಕೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಿಸಿದಾಗ, ಅತ್ಯಾಚಾರ ನಡೆದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಳು. ಈ ಸಂಬಂಧ ಇಬ್ಬರು ಯುವಕರ ಮೇಲೆ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ವಿಧಿವಿಜ್ಞಾನ ತಂಡವು ಘಟನಾ ಸ್ಥಳದಲ್ಲಿದ್ದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT