ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರಕ್ಕೊಳಗಾಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆ

Last Updated 26 ಫೆಬ್ರುವರಿ 2020, 8:45 IST
ಅಕ್ಷರ ಗಾತ್ರ

ನವದೆಹಲಿ: ಮೂವರು ವ್ಯಕ್ತಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ನೊಂದ 14 ವರ್ಷದ ಅಪ್ರಾಪ್ತೆಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಬೆತುಲ್‌ನಲ್ಲಿ ನಡೆದಿದೆ.

ಸಂತ್ರಸ್ತೆಯು ಶೇ 90ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು ಗಂಭೀರ ಸ್ಥಿತಿಯಲ್ಲಿದ್ದಾಳೆ. ಹೆಚ್ಚಿನ ಚಿಕಿತ್ಸೆಗಾಗಿಆಕೆಯನ್ನು ನಾಗಪುರದ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ತಿಳಿಸಿದ್ದಾರೆ.

ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ವೇಳೆ ನೀಡಿರುವ ಹೇಳಿಕೆಯಲ್ಲಿ, ಕೆಲ ಜನರು ನನ್ನ ಮೇಲೆ ಅತ್ಯಾಚಾರ ಎಸಗಿದರು ಎಂದು ತಿಳಿಸಿದ್ದಾಳೆ. ನಮ್ಮ ತಂಡವು ತನಿಖೆ ಕೈಗೊಂಡಿದೆ ಎಂದು ಎಸ್‌ಪಿ ಡಿ.ಎಸ್. ಭದೌರಿಯ ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT