ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ | ಬಾಲಕಿ ಮೇಲೆ ಅತ್ಯಾಚಾರ: ಮೂವರು ಬಾಲಕರ ಬಂಧನ

Published 22 ಜೂನ್ 2024, 4:20 IST
Last Updated 22 ಜೂನ್ 2024, 4:20 IST
ಅಕ್ಷರ ಗಾತ್ರ

ಭದೋಹಿ (ಉತ್ತರ ಪ್ರದೇಶ): 16 ವರ್ಷದ ಬಾಲಕಿಯ ಮೇಲೆ ಮೂವರು ಬಾಲಕರು ಅತ್ಯಾಚಾರವೆಸಗಿದ್ದು, ಕೃತ್ಯದ ವಿಡಿಯೊ ಚಿತ್ರೀಕರಿಸಿ ಅಂತರ್ಜಾಲದಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್‌ 1ರಂದು ಬಾಲಕಿ ಮನೆ ಪಕ್ಕದ ಅಂಗಡಿಗೆ ಹೋಗಿದ್ದ ವೇಳೆ ಮೂವರು ಬಾಲಕರು ಅವಳನ್ನು ಬಲವಂತವಾಗಿ ಕೋಣೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಜತೆಗೆ, ಕೃತ್ಯದ ವಿಡಿಯೊ ಚಿತ್ರೀಕರಿಸಿ, ಆಕೆಗೆ ಬೆದರಿಕೆ ಹಾಕಿದ್ದಾರೆ ಎಂದು ಗೋಪಿಗಂಜ್‌ ಎಸ್‌ಎಚ್‌ಒ ಸಂತೋಷ್‌ ಕುಮಾರ್‌ ಸಿಂಗ್‌ ಹೇಳಿದ್ದಾರೆ.

ಮತ್ತೆ ಅಂಗಡಿಗೆ ಬರುವಂತೆ ಬಾಲಕಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಬಾಲಕಿ ಬರಲು ಒಪ್ಪದಿದ್ದಾಗ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ತಿಳಿದ ಸಂತ್ರಸ್ತೆಯ ಕುಟುಂಬದವರು ಮೂವರು ಬಾಲಕರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಮೂವರು ಬಾಲಕರು 15 ರಿಂದ 17 ವರ್ಷದೊಳಗಿನವರು ಎಂದು ಸಿಂಗ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT