ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೋದರ, ತಂದೆಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ, ತಾತ-ಚಿಕ್ಕಪ್ಪನಿಂದ ಕಿರುಕುಳ

Last Updated 19 ಮಾರ್ಚ್ 2022, 10:37 IST
ಅಕ್ಷರ ಗಾತ್ರ

ಪುಣೆ: ಬಾಲಕಿ ಮೇಲೆ ಆಕೆಯ ಸಹೋದರ ಮತ್ತು ಅವರ ತಂದೆಯೇ ಪ್ರತ್ಯೇಕವಾಗಿ ಅತ್ಯಾಚಾರ ಎಸಗಿದ್ದಾರೆ. ಇದರೊಂದಿಗೆ ಆಕೆಯ ತಾತ ಮತ್ತು ದೂರದ ಸಂಬಂಧಿಯಾಗಿದ್ದ ಚಿಕ್ಕಪ್ಪ ಕೂಡ ಆಕೆಗೆ ಕಿರುಕುಳ ನೀಡುತ್ತಿದ್ದರು. ಕಳೆದ ಐದು ವರ್ಷಗಳಿಂದಲೂ ಬಾಲಕಿ ಮೇಲೆ ಅಪರಾಧ ಎಸಗಲಾಗಿದೆ ಎಂದು ಪುಣೆ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅತ್ಯಾಚಾರ ಮತ್ತು ಕಿರುಕುಳಕ್ಕೆ ಸಂಬಂಧಿಸಿದಂತೆ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಯಾರನ್ನೂ ಬಂಧಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋದರ ಮತ್ತು ತಂದೆಯ (45) ಮೇಲೆ ಅತ್ಯಾಚಾರ ಪ್ರಕರಣ ಹಾಗೂ ಆಕೆಯ 60 ವರ್ಷದ ತಾತ ಮತ್ತು ಚಿಕ್ಕಪ್ಪನ ಮೇಲೆ ಕಿರುಕುಳದ ಪ್ರಕರಣ ದಾಖಲಾಗಿದೆ. ಸದ್ಯ ಬಾಲಕಿಯು ಪುಣೆಯ ಬಂಡ್‌ಗಾರ್ಡನ್ ಪೊಲೀಸ್ ಠಾಣೆಯಲ್ಲಿದ್ದಾಳೆ.

ಬಿಹಾರದಿಂದ ಬಂದಿದ್ದ ಬಾಲಕಿ ಮತ್ತು ಆಕೆಯ ಕುಟುಂಬದವರು ಸದ್ಯ ಪುಣೆಯಲ್ಲಿ ನೆಲೆಸಿದ್ದಾರೆ.

ಶಾಲೆಯಲ್ಲಿ 'ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ'ದ ಕುರಿತಾಗಿ ಸೆಷನ್ ನಡೆಸುವ ವೇಳೆ ಈ ಘಟನೆಯನ್ನು ಬಾಲಕಿ ವಿವರಿಸಿದ್ದಾಳೆ. ಕಳೆದ 5 ವರ್ಷಗಳಿಂದಲೂ ಇದೇ ನಡೆಯುತ್ತಿದ್ದುದಾಗಿ ತಿಳಿಸಿದ್ದಾಳೆ. ಬಿಹಾರದಲ್ಲಿ ವಾಸಿಸುತ್ತಿದ್ದಾಗ 2017ರಿಂದ ತಂದೆಯು ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದ. ಬಾಲಕಿಯ ಸೋದರ 2020 ರಿಂದ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಆಕೆಯ ತಾತ ಮತ್ತು ಚಿಕ್ಕಪ್ಪ ಕೂಡ ಕಿರುಕುಳ ನೀಡಿದ್ದಾರೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಿನಿ ಸತ್ಪುಟೇ ತಿಳಿಸಿದ್ದಾರೆ.

ಪ್ರತಿಯೊಬ್ಬರೂ ಬಾಲಕಿ ಮೇಲೆ ಪ್ರತ್ಯೇಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆಕೆಗೆ ಇದು ಅರಿವಿಗೆ ಬಂದಿಲ್ಲ. ಇದು ಸಾಮೂಹಿಕ ಅತ್ಯಾಚಾರ ಪ್ರಕರಣವಲ್ಲ. ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT