ನವದೆಹಲಿ: 5 ವರ್ಷದ ಹೆಣ್ಣುಮಗುವಿನ ಮೇಲೆ 14 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಘಟನೆ ನೈಋತ್ಯ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದರು.
ಗುರುವಾರ ಮಧ್ಯಾಹ್ನ ಮಗುವಿನ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಕೃತ್ಯ ಎಸಗಲಾಗಿದೆ. ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಪೋಷಕರ ಸಮ್ಮುಖದಲ್ಲಿ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದರು.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 65 (2) ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಬಾಲಗೃಹಕ್ಕೆ ಕಳುಹಿಸಲಾಗಿದೆ. ಪ್ರಕರಣದ ತನಿಖೆಯು ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.