ಐಜ್ವಾಲ್: ಮಿಜೋರಾಂ ಪೊಲೀಸ್ ಮತ್ತು ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಸಿಐಡಿ (ವಿಶೇಷ ಶಾಖೆ) ಬೃಹತ್ ಪ್ರಮಾಣದ 7.62 ಎಂಎಂ ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ. ಅಲ್ಲದೆ ಈ ಸಂಬಂಧ ಐಜ್ವಾಲ್ ಜಿಲ್ಲೆಯಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
.ಮಿಜೋರಾಂ | ಅಗ್ನಿ ಅವಘಡ: 8 ಮನೆಗಳು, 4 ಅಂಗಡಿಗಳು ಭಸ್ಮ.
ನಿರ್ದಿಷ್ಟ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ತಂಡವು ಮಂಗಳವಾರ ರಾಜ್ಯ ರಾಜಧಾನಿ ಐಜ್ವಾಲ್ನಿಂದ ಸುಮಾರು 36 ಕಿ.ಮೀ ದೂರದಲ್ಲಿರುವ ಸೆಲಿಂಗ್ ಗ್ರಾಮದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ಪಿಕಪ್ ಟ್ರಕ್ನಿಂದ ಸುಮಾರು ₹16.54 ಲಕ್ಷ ಮೌಲ್ಯದ 7.62 ಎಂಎಂನ 3,008 ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ಪಿಕಪ್ ಟ್ರಕ್ನ ಚಾಲಕ ಐಜ್ವಾಲ್ನ ಝೌಂಗ್ಟುಯಿ ಪ್ರದೇಶದ ನಿವಾಸಿ ಲಾಲಾವಿತಂಗಾ (48) ಬಂಧಿತ. ಮದ್ದುಗುಂಡುಗಳನ್ನು ಸಾಗಿಸಿದ್ದಕ್ಕಾಗಿ ಆತನನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
.ಮಿಜೋರಾಂ: ₹1.48 ಕೋಟಿ ಮೌಲ್ಯದ ವಿದೇಶಿ ಕರೆನ್ಸಿ ನೋಟುಗಳ ಕಳ್ಳಸಾಗಣೆ; ಇಬ್ಬರ ಬಂಧನ.
ಮದ್ದುಗುಂಡುಗಳನ್ನು ಸಾಗಿಸಲು ಬಳಸಿದ ವಾಹನವನ್ನು ನಾಗರಿಕ ಸಾಕ್ಷಿಗಳ ಸಮ್ಮುಖದಲ್ಲಿ ಏಜೆನ್ಸಿಗಳು ವಶಪಡಿಸಿಕೊಂಡಿವೆ. ಈ ಸಂಬಂಧ ಐಜ್ವಾಲ್ನ ಬಾಂಗ್ಕಾವ್ನ್ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
.ಮಿಜೋರಾಂ: ಕಳ್ಳಸಾಗಣೆ ಮಾಡುತ್ತಿದ್ದ ₹8 ಕೋಟಿ ಮೌಲ್ಯದ ವಿದೇಶಿ ಸಿಗರೇಟ್, ಅಡಿಕೆ ವಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.