ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ವಿವಾದ ಇತ್ಯರ್ಥಕ್ಕೆ ಮಿಜೋರಾಂ, ಅಸ್ಸಾಂ ಒಪ್ಪಿಗೆ

Published 9 ಫೆಬ್ರುವರಿ 2024, 13:10 IST
Last Updated 9 ಫೆಬ್ರುವರಿ 2024, 13:10 IST
ಅಕ್ಷರ ಗಾತ್ರ

ಐಜ್ವಾಲ್: ಈಶಾನ್ಯ ರಾಜ್ಯಗಳಾದ ಮಿಜೋರಾಂ ಮತ್ತು ಅಸ್ಸಾಂ ನಡುವೆ ದೀರ್ಘಕಾಲದಿಂದ ಇರುವ ಗಡಿ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಂಟಿ ಪ್ರಯತ್ನ ನಡೆಸಲು ಉಭಯ ರಾಜ್ಯಗಳು ಒಪ್ಪಿಕೊಂಡಿವೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಸದ್ಯ ಗುವಾಹಟಿಯಲ್ಲಿರುವ ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಅವರನ್ನು ಅಸ್ಸಾಂ ಮುಖ್ಯಮಂತ್ರಿ  ಹಿಮಂತ ಬಿಸ್ವ ಶರ್ಮ ಶುಕ್ರವಾರ ಭೋಜನ ಕೂಟಕ್ಕೆ ಆಹ್ವಾನಿಸಿ, ಗಡಿ ವಿವಾದದ ಬಗ್ಗೆ ಚರ್ಚೆ ನಡೆಸಿದರು.

ಮಿಜೋರಾ ಮತ್ತು ಅಸ್ಸಾಂ ನಡುವಿನ ಗಡಿ ವಿವಾದವು 2021ರ ಜುಲೈನಲ್ಲಿ ಉಗ್ರ ಸ್ವರೂಪ ಪಡೆದಿತ್ತು. ಎರಡೂ ಕಡೆಯ ಪೊಲೀಸ್ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಸಂಘರ್ಷದಲ್ಲಿ ಅಸ್ಸಾಂನ ಆರು ಮಂದಿ ಪೊಲೀಸರು ಹಾಗೂ ಒಬ್ಬ ನಾಗರಿಕ ಸಾವನ್ನಪ್ಪಿದ್ದರು.              

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT