ಮಿಜೋರಾಂ: ಮಿಜೋರಾಂನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೌನ್‌ಪುಯಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಪರಿಣಾಮ ಹೊಸದಾಗಿ ನಿರ್ಮಾಣವಾಗಿದ್ದ ರೈಲು ನಿಲ್ದಾಣ ಉದ್ಘಾಟನೆಗೆ ಮುನ್ನವೇ ಕುಸಿದಿದೆ.
ರೈಲು ನಿಲ್ದಾಣ ಕುಸಿಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಕಳೆದ ಕೆಲವು ದಿನಗಳಿಂದ ಮಿಜೋರಾಂನ ಈಶಾನ್ಯ ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು ಆ. 20ರಿಂದ ಹಲವೆಡೆ ಭೂಕುಸಿತ ಸಂಭವಿಸುತ್ತಲೇ ಇದೆ.
ಈ ಹಿನ್ನೆಲೆ ನಾಲ್ಕು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ.
ಮಾರ್ಚ್‌ನಿಂದ ಈವರೆಗೆ ಭೂಕುಸಿತ ಹಾಗೂ ಮಳೆ ಸಂಬಂಧಿ ಅವಘಡಗಳಿಂದಾಗಿ 40ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ಸರ್ಕಾರ ತಿಳಿಸಿದೆ.