ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ತಲೈವಾ ಬೇಕು', ಆಸ್ಪತ್ರೆ ಮುಂದೆ ಹಠ ಹಿಡಿದು ನಿಂತ ಕರುಣಾನಿಧಿ ಅಭಿಮಾನಿಗಳು

Last Updated 30 ಜುಲೈ 2018, 1:28 IST
ಅಕ್ಷರ ಗಾತ್ರ

ಚೆನ್ನೈ: ಅನಾರೋಗ್ಯ ನಿಮಿತ್ತ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿ ಎಂದು ಅಭಿಮಾನಿಗಳು ಹಠ ಹಿಡಿದಿದ್ದಾರೆ.

ಕಳೆದ ಮೂರು ದಿನಗಳಿಂದ ನಾವು ನೀರು, ಆಹಾರ ಬಿಟ್ಟು ಇಲ್ಲಿ ಕಾಯುತ್ತಿದ್ದೇವೆ.ನಮಗೇನೂ ಬೇಡ. ತಲೈವಾ ಅವರು ಬೇಕು.ಅವರ ಆರೋಗ್ಯ ಸ್ಥಿತಿ ಬಗ್ಗೆ ನೀವು ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ ಯಾಕೆ? ನಮಗೆ ಅವರು ಬೇಕು ಎಂದು ಎಎನ್‍ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅಭಿಮಾನಿಯೊಬ್ಬರು ಹೇಳಿದ್ದಾರೆ.

ಏತನ್ಮಧ್ಯೆ. ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಎ.ರಾಜಾ ಅವರ ಖಾಸಗಿ ಕಾರ್ಯದರ್ಶಿ ಜನರಲ್ಲಿ ವಿನಂತಿಸಿದ್ದಾರೆ.

ಭಾನುವಾರ ರಾತ್ರಿ ಆಸ್ಪತ್ರೆಯ ಹೊರಗೆ ನೂರಾರು ಜನ ಅಭಿಮಾನಿಗಳು ಜಮಾಯಿಸಿದ್ದರಿಂದ ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದರು.

ಕರುಣಾನಿಧಿ ಅವರ ಗೋಪಾಲಪುರಂ ನಿವಾಸದ ಮುಂದೆಯೂ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಮೂತ್ರನಾಳದ ಸೋಂಕು ಮತ್ತು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಕರುಣಾನಿಧಿ ಅವರಿಗೆ ಗೋಪಾಲಪುರಂನಲ್ಲಿರುವ ಅವರ ನಿವಾಸದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಶುಕ್ರವಾರ ತಡರಾತ್ರಿ ರಕ್ತದ ಒತ್ತಡ ದಿಢೀರ್‌ ಇಳಿಕೆಯಾದ ಕಾರಣ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರೋಗ್ಯ ಸ್ಥಿತಿ ಸುಧಾರಿಸಿದೆ
ಕರುಣಾನಿಧಿ ಅವರ ಆರೋಗ್ಯ ಸುಧಾರಿಸಿದೆ ಎಂದು ಕಾವೇರಿ ಆಸ್ಪತ್ರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT