ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರಿಗೆ ಬಿಜೆಪಿ ಆಮಿಷ ಒಡ್ಡಿದ್ದು, ಬೆದರಿಕೆ ಹಾಕಲಾಗುತ್ತಿದೆ. ಇದೊಂದು ಗಂಭೀರ ವಿಷಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.

ಈ ಕುರಿತು ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿ ಇಂದು ಸಭೆ ಸೇರಿ ಪರಿಸ್ಥಿತಿ ಅವಲೋಕಿಸಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬಿಹಾರ: ವಿಶ್ವಾಸಮತ ಯಾಚನೆಗೂ ಮುನ್ನ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ರಾಜೀನಾಮೆ

ಪಕ್ಷ ಒಡೆಯಲು ಆಮಿಷ ಒಡ್ಡಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಕೆಲವು ಶಾಸಕರು ನನ್ನ ಬಳಿ ಬಂದು ಹೇಳಿದ್ದಾರೆ. ಇದು ಅತ್ಯಂತ ಗಂಭೀರ ವಿಷಯವಾಗಿದೆ. ಈ ಕುರಿತು ಇಂದು ಸಂಜೆ 4 ಗಂಟೆಗೆ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಸಿಬಿಐ ದಾಳಿ ಬಗ್ಗೆ ಕೇಜ್ರಿವಾಲ್, ಗುಜರಾತ್ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ತನಿಖೆ ಹಾಗೂ ದಾಳಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಎಎಪಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದರೆ ಸಿಎಂ ಸ್ಥಾನ ಹಾಗೂ ಸಿಬಿಐ ಹಾಗೂ ಇ.ಡಿ ಪ್ರಕರಣ ಕೈಬಿಡುವುದಾಗಿ ತಮಗೆ ಬಿಜೆಪಿ ಆಮಿಷ ಒಡ್ಡಿರುವುದಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿದ್ದರು.

ಇದನ್ನೂ ಓದಿ:ಆರ್ಜೆಡಿ ನಾಯಕರ ಮನೆ ಸೇರಿ ಬಿಹಾರದ ಹಲವೆಡೆ ಸಿಬಿಐ ದಾಳಿ, ಶೋಧ ಕಾರ್ಯಾಚರಣೆ

ಶಾಸಕರಾದ ಅಜಯ್ ದತ್, ಸಂಜೀವ್ ಜಾ, ಸೋಮನಾಥ ಭಾರತಿ ಮತ್ತು ಕುಲದೀಪ್ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂದು ಎಎಪಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.

ಬಿಜೆಪಿಗೆ ಸೇರಿದರೆ ತಲಾ ₹20 ಕೋಟಿ ಮತ್ತು ಇತರೆ ಶಾಸಕರನ್ನು ಕರೆತಂದರೆ ₹25 ಕೋಟಿ ನೀಡುವ ಆಮಿಷ ಒಡ್ಡಿರುವುದಾಗಿ ಸಿಂಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.