ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಜೋರಾಂನಲ್ಲಿ ಮತ್ತೆ ಎಂಎನ್ಎಫ್‌ ಅಧಿಕಾರಕ್ಕೆ: ಮುಖ್ಯಮಂತ್ರಿ ಝೊರಾಂಥಾಂಗ ವಿಶ್ವಾಸ

Published 20 ಅಕ್ಟೋಬರ್ 2023, 13:23 IST
Last Updated 20 ಅಕ್ಟೋಬರ್ 2023, 13:23 IST
ಅಕ್ಷರ ಗಾತ್ರ

ಐಜ್ವಾಲ್‌, ಮಿಜೋರಾಂ: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್‌ ಫ್ರಂಟ್ (ಎಂಎನ್‌ಎಫ್) 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಉಳಿಸಿಕೊಳ್ಳುತ್ತದೆ ಎಂದು ಎಂಎನ್‌ಎಫ್ ಅಧ್ಯಕ್ಷ ಹಾಗೂ ಮಿಜೋರಾಂ ಮುಖ್ಯಮಂತ್ರಿ ಝೊರಾಂಥಾಂಗ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಐಜ್ವಾಲ್ ಪೂರ್ವ -1 ಸ್ಥಾನದಿಂದ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗಿಂತ ಪ್ರಮುಖ ವಿರೋಧ ಪಕ್ಷ ಝೊರಾಂ ಪೀಪಲ್ಸ್ ಮೂವ್‌ಮೆಂಟ್‌ (ಝಡ್‌ಪಿಎಂ) ಎಂಎನ್ಎಗೆ ಪೈಪೋಟಿ ನೀಡಲಿದೆ ಎಂದರು.

‘ಮಿಜೋರಾಂನಲ್ಲಿ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸ ಇದೆ. ಹಲವಾರು ಅಡೆತಡೆಗಳ ಹೊರತಾಗಿಯೂ ಕಳೆದ ಐದು ವರ್ಷಗಳಲ್ಲಿ ನಾವು ಮಾಡಿದ ಕೆಲಸಗಳನ್ನು ಜನರು ಶ್ಲಾಘಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT