ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತರೆಳಿದ್ದ ಪೊಲೀಸರ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಸುಮಾರು 50 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಹಾನಿ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ತಾಯಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಪೊಲೀಸರ ತಂಡ ಆಸ್ಪತ್ರೆಗೆ ತೆರಳಿತ್ತು. ಆ ಸಮಯದಲ್ಲಿ ಆಸ್ಪತ್ರೆಯ ಹೊರಗಡೆ ಜಮಾಯಿಸಿದ್ದ ಜನರ ಗುಂಪು ಪೊಲೀಸರ ಮೇಲೆಯೇ ದಾಳಿ ನಡೆಸಿತ್ತು.

ಬಳಿಕ ಆರೋಪಿ ಪತ್ತೆಗಾಗಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆಯೂ 20ರಿಂದ 25 ಯುವಕರ ಗುಂಪು ಪೊಲೀಸರೊಂದಿಗೆ ವಾಗ್ವಾದ ನಡೆಸಿತ್ತು. ಜತೆಗೆ ಹಲ್ಲೆ ನಡೆಸಿತ್ತು.

ಘಟನೆ ಸಂಬಂಧ ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.