ಇಂಫಾಲ: ಜನರಿಗೆ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮಣಿಪುರ ಹೈಕೋರ್ಟ್ ಸೂಚಿಸಿದೆ.
ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ ಕಾರಣ ಮೊಬೈಲ್ ಇಂಟರ್‌ನೆಟ್ ಸೇವೆಗಳಿಗೆ ರಾಜ್ಯದಲ್ಲಿ ನಿರ್ಬಂಧ ಹೇರಲಾಗಿತ್ತು.
ಇಂಟರ್‌ನೆಟ್ ಸೇವೆಗಳನ್ನು ಮರುಸ್ಥಾಪಿಸಲು ಕೋರಿ ಸಲ್ಲಿಸಿದ ವಿವಿಧ ಅರ್ಜಿಗಳನ್ನು ನ್ಯಾಯಾಲಯ ಪರಿಗಣಿಸಿದೆ.
ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಎ. ಬಿಮೋಲ್ ಸಿಂಗ್ ಮತ್ತು ಗುಣೇಶ್ವರ್ ಶರ್ಮಾ ಅವರನ್ನು ಒಳಗೊಂಡ ಪೀಠವು, ಹಂತ ಹಂತವಾಗಿ ಜನರಿಗೆ ಇಂಟೆರ್‌ನೆಟ್ ಸೇವೆಗಳನ್ನು ಒದಗಿಸಲು ಕಾರ್ಯವಿಧಾನವನ್ನು ರೂಪಿಸುವಂತೆ ಸೂಚಿಸಿದೆ.
ಈ ಸಂಬಂಧ ವರದಿಯನ್ನು ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ವೇಳೆ ಇಂಟೆರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.