ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಇಂಟರ್‌ನೆಟ್‌ ಸೇವೆ ಪುನರಾರಂಭ

Last Updated 26 ಜನವರಿ 2021, 16:31 IST
ಅಕ್ಷರ ಗಾತ್ರ

ಶ್ರೀನಗರ: ‘ಗಣರಾಜ್ಯೋತ್ಸವದ ಅಂಗವಾಗಿ ಮಂಗಳವಾರ ಕಾಶ್ಮೀರದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆದ ನಂತರ ಇಂಟರ್‌ನೆಟ್‌ ಸೇವೆಯನ್ನು ಪುನರಾರಂಭಿಸಲಾಯಿತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಣರಾಜ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಕಾಶ್ಮೀರ ಕಣಿವೆಯಲ್ಲಿ ಬೆಳಿಗ್ಗೆಯಿಂದ ಕೆಲ ಗಂಟೆಗಳವರೆಗೆ ಮೊಬೈಲ್‌ಗೆ ಒದಗಿಸಲಾಗುತ್ತಿದ್ದ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.

2005ರಲ್ಲಿ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳು ನಿಗದಿಯಾಗಿದ್ದ ಸ್ಥಳದ ಸನಿಹ ಉಗ್ರರು ಮೊಬೈಲ್‌ ಬಳಸಿ ಬಾಂಬ್‌ ಸ್ಫೋಟಿಸಿದ್ದರು. ಆ ಘಟನೆಯ ನಂತರ ಭದ್ರತೆಯ ದೃಷ್ಟಿಯಿಂದ ವಿಶೇಷ ದಿನಗಳಂದು ಕೆಲ ಕಾಲ ಮೊಬೈಲ್‌ ಹಾಗೂ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲಾಗುತ್ತಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT