ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ನೀತಿ ಪ್ರಕರಣ | ಅರವಿಂದ ಕೇಜ್ರಿವಾಲ್‌ ಬಳಸಿದ್ದ ಮೊಬೈಲ್ ನಾಪತ್ತೆ: ವರದಿ

Published 25 ಮಾರ್ಚ್ 2024, 7:00 IST
Last Updated 25 ಮಾರ್ಚ್ 2024, 7:00 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ಉದ್ದೇಶಿತ ಅಬಕಾರಿ ನೀತಿ ಹಗರಣದ ವೇಳೆ ಬಳಸಿದ್ದ ಮೊಬೈಲ್‌ ನಾಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್‌ ಅವರನ್ನು ಪ್ರಶ್ನಿಸಿದರೆ, ಮೊಬೈಲ್‌ ಎಲ್ಲಿದೆ ಎಂಬುದು ಗೊತ್ತಿಲ್ಲ ಎಂದು ಹೇಳಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.

ಇ.ಡಿ ಮೂಲಗಳ ಪ್ರಕಾರ, ನಾಪತ್ತೆಯಾಗಿರುವ ಮೊಬೈಲ್‌ನಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಇರಬಹುದು. ಇದು ಈವರೆಗೆ ಕಾಣೆಯಾದ 171ನೇ ಸಾಧನವಾಗಿದೆ.

ಸದ್ಯ ಪತ್ತೆಯಾಗಿರುವ 17 ಮೊಬೈಲ್‌ಗಳಿಂದ ಮಾಹಿತಿ ಕಲೆಹಾಕಿದ ನಂತರ, ಇ.ಡಿ ತನಿಖೆ ವೇಗ ಪಡೆದಿದೆ. ಇವುಗಳಿಂದ ಲಭ್ಯವಾದ ಮಾಹಿತಿ ಆಧರಿಸಿ, ಮನೀಶ್‌ ಸಿಸೋಡಿಯಾ ಅವರ ಹೆಸರನ್ನು ಆರೋಪಪಟ್ಟಿಯಲ್ಲಿ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ.

ದಾಖಲೆ ನಾಶ ಮಾಡುವ ಸಲುವಾಗಿ, ನಾಪತ್ತೆಯಾಗಿರುವ ಮೊಬೈಲ್‌ಗಳನ್ನೂ ನಾಶ ಮಾಡಿರುವ ಸಾಧ್ಯತೆ ಇದೆ ಎಂದು ತನಿಖಾಧಿಖಾರಿಗಳು ಶಂಕಿಸಿದ್ದಾರೆ.

ಅಬಕಾರಿ ನೀತಿ ಪ್ರಕರಣದ ಹೆಚ್ಚಿನ ಆರೋಪಿಗಳು 2022ರ ಮೇ–ಆಗಸ್ಟ್‌ ಅವಧಿಯಲ್ಲಿ ತಮ್ಮ ಮೊಬೈಲ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ಬದಲಿಸಿದ್ದಾರೆ. ಆರೋಪಿಗಳಿಂದ ವಶಕ್ಕೆ ಪಡೆಯಲಾದ ಮೊಬೈಲ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಿಂದಲೇ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂಬುದನ್ನು ಇ.ಡಿ ಆರೋಪಪಟ್ಟಿಯಲ್ಲೂ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT