ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾಪಡೆಯ ವಿಮಾನ ನಿಲ್ದಾಣದಲ್ಲಿ ಇಳಿಯಲು ರಾಹುಲ್‌ಗೆ ಅನುಮತಿ ನಿರಾಕರಣೆ:ಕಾಂಗ್ರೆಸ್

Published 1 ಡಿಸೆಂಬರ್ 2023, 10:20 IST
Last Updated 1 ಡಿಸೆಂಬರ್ 2023, 10:20 IST
ಅಕ್ಷರ ಗಾತ್ರ

ಕೊಚ್ಚಿ: ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಖಾಸಗಿ ಜೆಟ್ ವಿಮಾನಕ್ಕೆ ಇಲ್ಲಿನ ನೌಕಾಪಡೆಯ ವಿಮಾನ ನಿಲ್ದಾಣದಲ್ಲಿ ಇಳಿಯಲು ರಕ್ಷಣಾ ಸಚಿವಾಲಯವು ಅನುಮತಿ ನಿರಾಕರಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

ಆರಂಭದಲ್ಲಿ ರಾಹುಲ್ ಗಾಂಧಿ ಅವರ ವಿಮಾನ ಲ್ಯಾಂಡ್ ಆಗಲು ಅನುಮತಿಸಲಾಗಿತ್ತು. ಆದರೆ ಬಳಿಕ ಅನುಮತಿ ನಿರಾಕರಿಸಲಾಗಿದೆ ಎಂದು ಎರ್ನಾಕುಳಂ ಡಿಸಿಸಿ ಅಧ್ಯಕ್ಷ ಮೊಹಮ್ಮದ್ ಶಿಯಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದಾಗಿ ಕಣ್ಣೂರು ಜಿಲ್ಲೆಯಿಂದ ರಾಹುಲ್ ಗಾಂಧಿ ಹೊರಟ ವಿಮಾನವು ನೆಡುಂಬಶ್ಶೇರಿಯ ಕೊಚ್ಚಿನ್ ಅಂತರರಾಷ್ಟ್ರೀಯ ಏರ್‌ಪೋರ್ಟ್ ಲಿಮಿಟೆಡ್ (ಸಿಐಎಎಲ್) ನಿಲ್ದಾಣದಲ್ಲಿ ಇಳಿಸಲು ಸೂಚಿಸಲಾಯಿತು ಎಂದು ಅವರು ತಿಳಿಸಿದರು.

ಸದ್ಯ ಕೇರಳ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಇಂದು ಕೊಚ್ಚಿಯಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT