ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ರಾಜ್ಯಗಳ ಚುನಾವಣೆ: ಯಾವ ರಾಜ್ಯದಲ್ಲಿ ಎಷ್ಟು ಮತದಾರರು?

ಚುನಾವಣೆ ನಡೆಯುವ ಐದು ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ
Published 9 ಅಕ್ಟೋಬರ್ 2023, 10:14 IST
Last Updated 9 ಅಕ್ಟೋಬರ್ 2023, 10:14 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಐದು ರಾಜ್ಯಗಳಾದ ಛತ್ತೀಸಗಢ, ಮಿಜೋರಾಂ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಮಾದರಿ ನೀತಿ ಸಂಹಿತೆ ಈಗಿನಿಂದಲೇ ಜಾರಿಯಾಗಿದೆ. ಚುನಾವಣಾ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಡಿಸೆಂಬರ್ 3ರಂದು ಮತ ಎಣಿಕೆ:

ನವೆಂಬರ್ 7ರಂದು ಮಿಜೋರಾಂ, 7 ಮತ್ತು 17ರಂದು ಛತ್ತೀಸಗಢ, 17ರಂದು ಮಧ್ಯಪ್ರದೇಶ, 23ರಂದು ರಾಜಸ್ಥಾನ ಮತ್ತು 30ರಂದು ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಐದು ರಾಜ್ಯಗಳ ಪೈಕಿ ಛತ್ತೀಸಗಢದಲ್ಲಿ ಮಾತ್ರ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಎಲ್ಲಾ ರಾಜ್ಯಗಳ ಮತ ಎಣಿಕೆ ನಡೆಯಲಿದೆ.

ನವೆಂಬರ್ 7 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಮಿಜೋರಾಂನ 40 ವಿಧಾನಸಭಾ ಸ್ಥಾನಗಳಿಗೆ ಮತ್ತು ಛತ್ತೀಸಗಢದ 20 ಸ್ಥಾನಗಳಿಗೆ ಅಕ್ಟೋಬರ್ 13ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 20, ನಾಮಪತ್ರಗಳ ಪರಿಶೀಲನೆಗೆ ಅಕ್ಟೋಬರ್ 21 ಮತ್ತು ಉಮೇದುವಾರಿಕೆ ವಾಪಸ್‌ ಪಡೆಯಲು ಅಕ್ಟೋಬರ್ 23 ಕೊನೆಯ ದಿನಾಂಕವಾಗಿದೆ.

ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಸ್ಥಾನಗಳಿಗೆ ಮತ್ತು ಛತ್ತೀಸಗಢದಲ್ಲಿ ಎರಡನೇ ಹಂತದ ಚುನಾವಣೆ (70 ಸ್ಥಾನಗಳಿಗೆ) ನವೆಂಬರ್ 17ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನಾಂಕ. ನಾಮಪತ್ರಗಳ ಪರಿಶೀಲನೆಗೆ ಅಕ್ಟೋಬರ್ 31 ಮತ್ತು ಉಮೇದುವಾರಿಕೆ ವಾಪಸ್‌ ಪಡೆಯಲು ನವೆಂಬರ್ 2 ಕೊನೆಯ ದಿನ.

ನವೆಂಬರ್ 23ರಂದು ರಾಜಸ್ಥಾನದ ಎಲ್ಲಾ 200 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 6 ನಾಮಪತ್ರಗಳನ್ನು ಸಲ್ಲಿಸುವ ಕೊನೆಯ ದಿನಾಂಕ. ನವೆಂಬರ್ 7ರಂದು ನಾಮಪತ್ರಗಳ ಪರಿಶೀಲನೆ ‌ನಡೆಯಲಿದೆ. ನವೆಂಬರ್ 9 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ.

ನವೆಂಬರ್ 30ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ನವೆಂಬರ್ 10 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ. ನವೆಂಬರ್ 13ರಂದು ನಾಮಪತ್ರಗಳ ಪರಿಶೀಲನೆ ಹಾಗೂ ನವೆಂಬರ್ 15 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ.

ಮತದಾರರರ ಸಂಖ್ಯೆ:

ಮಿಜೋರಾಂ: 8.52 ಲಕ್ಷ.

ಛತ್ತೀಸಗಢ: 2.03 ಕೋಟಿ

ಮಧ್ಯಪ್ರದೇಶ: 5.6 ಕೋಟಿ

ರಾಜಸ್ಥಾನ: 5.25 ಕೋಟಿ

ತೆಲಂಗಾಣ: 3.17 ಕೋಟಿ.(ಆಧಾರ– ಎಎನ್‌ಐ ಸುದ್ದಿ ಸಂಸ್ಥೆ)

ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ತಿಂಗಳುಗಳ ಮೊದಲು ನಡೆಯಲಿರುವ ಈ ಐದು ರಾಜ್ಯಗಳ ಚುನಾವಣೆ ರಾಜಕೀಯ ಪಕ್ಷಗಳಿಗೆ ನಿರ್ಣಾಯಕವಾಗಿದೆ.

ಮಾದರಿ ನೀತಿ ಸಂಹಿತೆ:

ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗುತ್ತದೆ. ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು, ಆಯಾ ಪಕ್ಷಗಳು ಯಾವ ರೀತಿ ನಡೆದುಕೊಳ್ಳಬೇಕು?, ಯಾವ ರೀತಿ ಪ್ರಚಾರ ಕೈಗೊಳ್ಳಬೇಕು?, ಅಭ್ಯರ್ಥಿಗಳು ಹಾಗೂ ಮತದಾರರು ಏನು ಮಾಡಬಾರದು?, ಯಾವ ವಿಚಾರವನ್ನು ಗಮನದಲ್ಲಿಡಬೇಕು? ಎಂಬುದರ ಬಗ್ಗೆ ಸೂಚನೆ ನೀಡುವ ಮಾರ್ಗಸೂಚಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT