ಪುರುಲಿಯಾ (ಪಶ್ಚಿಮ ಬಂಗಾಳ): ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ನಾಯಕರು ದ್ವೇಷ ಭಾಷಣಗಳನ್ನು ಮಾಡುತ್ತಾರೆ. ಆದರೂ ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ. ಬಿಜೆಪಿ ಆಡಳಿತದಲ್ಲಿ ಮಾದರಿ ನೀತಿ ಸಂಹಿತೆ ಮೋದಿ ನೀತಿ ಸಂಹಿತೆಯಾಗಿ ಪರಿವರ್ತನೆಯಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದರು.

ಪುರುಲಿಯಾದಲ್ಲಿ ಮಂಗಳವಾರ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮನ್ನು ಮಾತ್ರ ಹಿಂದೂಗಳು ಎಂದು ಪರಿಗಣಿಸುತ್ತಾರೆ. ಆದರೆ ಅವರು ಇತರ ಸಮುದಾಯಗಳ ಬಗ್ಗೆ ಯೋಚಿಸುವುದಿಲ್ಲ ಎಂದು ದೂರಿದರು.

ಮೋದಿ ಹಾಗೂ ಇತರ ಬಿಜೆಪಿ ನಾಯಕರು ತಮ್ಮ ದ್ವೇಷ ಭಾಷಣಗಳ ಮೂಲಕ ಕೆಳ ಜಾತಿಯ ಹಿಂದೂಗಳು, ಅಲ್ಪಸಂಖ್ಯಾತರು ಮತ್ತು ಇತರ ವರ್ಗದ ಜನರನ್ನು ಬೆದರಿಸುತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಮೌನವಾಗಿದೆ ಎಂದು ಅವರು ಆರೋಪಿಸಿದರು.

ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆ ಅಣಕವಾಗಿದೆ. ಇದನ್ನು ಮೋದಿ ನೀತಿ ಸಂಹಿತೆ ಎಂದು ಮರುನಾಮಕರಣ ಮಾಡಬೇಕು ಎಂದೂ ಅವರು ಹೇಳಿದರು.
.ಮೊಸಳೆ ಕಣ್ಣೀರು ಸುರಿಸುವುದನ್ನು ಮೋದಿ ನಿಲ್ಲಿಸಲಿ: ಮಮತಾ ಬ್ಯಾನರ್ಜಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.