ನವದೆಹಲಿ: ಮದುವೆಯಾದ ಐದೇ ತಿಂಗಳಲ್ಲಿ ಭೋಪಾಲ್ನ ತನ್ನ ಪತಿಯ ಮನೆಯಲ್ಲಿ 33 ವರ್ಷದ ಟ್ವಿಶಾ ಶರ್ಮಾ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಸಿಬಿಐಗೆ ವಹಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಸಿಬಿಐ ತಂಡ ಭೋಪಾಲ್ಗೆ ತೆರಳಿದ್ದು ರಾಜ್ಯ ಪೊಲೀಸರಿಂದ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಳ್ಳಲಿದೆ ಎನ್ನಲಾಗಿದೆ.

ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ಮಧ್ಯಪ್ರದೇಶ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬಹುದು ಎಂದು ಅಭಿಪ್ರಾಯಪಟ್ಟಿತ್ತು. ಶನಿವಾರವಷ್ಟೇ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗುತ್ತದೆ ಎಂದು ಮಧ್ಯಪ್ರದೇಶ ಸರ್ಕಾರ ಹೇಳಿತ್ತು.

‘ಸಾರ್ವಜನಿಕವಾಗಿ ಅಥವಾ ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡುವ ಬದಲು, ಸಂತ್ರಸ್ತೆಯ ಕುಟುಂಬದ ಸದಸ್ಯರು ಮತ್ತು ಆರೋಪಿಗಳು ತಮ್ಮ ಹೇಳಿಕೆಗಳನ್ನು ತನಿಖಾ ಸಂಸ್ಥೆಯ ಮುಂದೆ ಮಾತ್ರ ದಾಖಲಿಸಬೇಕು. ಇದರಿಂದಾಗಿ ನಡೆಯುತ್ತಿರುವ ತನಿಖೆಯ ಮೇಲೆ ಯಾವುದೇ ಪೂರ್ವಗ್ರಹ ಅಥವಾ ಪ್ರತಿಕೂಲ ಪರಿಣಾಮ ಬೀರದಂತೆ ನೋಡಿಕೊಳ್ಳಬಹುದು ಎಂದು ನಾವು ಒತ್ತಿಹೇಳಲು ಬಯಸುತ್ತೇವೆ’ ಎಂದು ಪೀಠ ತಿಳಿಸಿದೆ.

‘ಸಾಕ್ಷಿಗಳಾಗಬಹುದಾದ ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸುವುದನ್ನು ತಪ್ಪಿಸಬೇಕೆಂದು ನಾವು ಮಾಧ್ಯಮಗಳಿಗೆ ವಿನಂತಿಸುತ್ತೇವೆ. ಇದು ತನಿಖೆ ಮೇಲೆ ಅನಗತ್ಯವಾಗಿ ಪರಿಣಾಮ ಬೀರಬಹುದು. ಸಾರ್ವಜನಿಕರು ಕೂಡ ಊಹಾಪೋಹಗಳಿಂದ ದೂರವಿರಬೇಕು ಮತ್ತು ಪ್ರಮುಖ ತನಿಖಾ ಸಂಸ್ಥೆಯೊಂದರ ಮೇಲೆ ನಂಬಿಕೆ ಹಾಗೂ ವಿಶ್ವಾಸವನ್ನು ಇಡಬೇಕು ಎಂದು ನಾವು ವಿನಂತಿಸುತ್ತೇವೆ. ಸೂಕ್ತ ಸಮಯದಲ್ಲಿ ತನಿಖೆಯು ಒಂದು ನಿರ್ಣಾಯಕ ಅಂತ್ಯವನ್ನು ತಲುಪುತ್ತದೆ ಎಂಬ ವಿಶ್ವಾಸ ನಮಗಿದೆ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಭೋಪಾಲ್ನ ಕತಾರ ಹಿಲ್ಸ್ ಪ್ರದೇಶದಲ್ಲಿರುವ ಮನೆಯಲ್ಲಿ ಟ್ವಿಶಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮೇ 12ರಂದು ಪತ್ತೆಯಾಗಿತ್ತು.

ಪತಿ ಸಮರ್ಥ್ ಸಿಂಗ್ ಮತ್ತು ಅತ್ತೆ, ನಿವೃತ್ತ ನ್ಯಾಯಾಧೀಶರಾದ ಗಿರಿಬಾಲಾ ಸಿಂಗ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದಡಿ ಕತಾರ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

ಹತ್ತು ದಿನಗಳವರೆಗೆ ತಲೆಮರೆಸಿಕೊಂಡಿದ್ದ ಸಮರ್ಥ್ ಸಿಂಗ್ ಅವರನ್ನು ಶುಕ್ರವಾರ ಜಬಲಪುರದಲ್ಲಿ ಬಂಧಿಸಲಾಗಿತ್ತು. ಭೋಪಾಲ್ ನ್ಯಾಯಾಲಯವು ಸಮರ್ಥ್ ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಶನಿವಾರ ಆದೇಶಿಸಿತ್ತು.
.ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ:ಪ್ರಮುಖ ಆರೋಪಿ 6 ದಿನಗಳ ಸಿಬಿಐ ಕಸ್ಟಡಿಗೆ.ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣ: ಸಿಬಿಐ ತನಿಖೆಗೆ ಮಧ್ಯಪ್ರದೇಶ ಸರ್ಕಾರ ಶಿಫಾರಸು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.