ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇನೆ ಆಧುನೀಕರಣ ಪ್ರಕ್ರಿಯೆ ಅಬಾಧಿತ: ಸೇನೆ ಮುಖ್ಯಸ್ಥ ಜ.ನರವಣೆ

ಶಸ್ತ್ರಾಸ್ತ್ರ ಖರೀದಿಗೆ ಹಣಕಾಸು ಕೊರತೆ ಇಲ್ಲ: ಸೇನೆ ಮುಖ್ಯಸ್ಥ ಹೇಳಿಕೆ
Last Updated 30 ಮೇ 2021, 13:57 IST
ಅಕ್ಷರ ಗಾತ್ರ

ನವದೆಹಲಿ: ‘ಸೇನೆಯ ಆಧುನೀಕರಣ ಪ್ರಕ್ರಿಯೆ ಯಾವುದೇ ಅಡ್ಡಿ–ಆತಂಕಗಳಲ್ಲಿದೆಯೇ ಮುಂದುವರಿದಿದೆ. ದೇಶದ ಗಡಿ ರಕ್ಷಣೆಗೆ ಬೇಕಾದ ಶಸ್ತ್ರಾಸ್ತ್ರಗಳ ಖರೀದಿಗೆ ಹಣಕಾಸಿನ ಕೊರತೆಯೂ ಇಲ್ಲ’ ಎಂದು ಸೇನಾಪಡೆ ಮುಖ್ಯಸ್ಥ ಜನರಲ್‌ ಎಂ.ಎಂ.ನರವಣೆ ಹೇಳಿದ್ದಾರೆ.

ಪೂರ್ವ ಲಡಾಖ್‌ನ ಗಡಿಯಲ್ಲಿ ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಚೀನಾದೊಂದಿಗೆ ಸುದೀರ್ಘ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ ಸೇನೆಯ ಆಧುನೀಕರಣಕ್ಕೆ ಹಿನ್ನಡೆಯಾಗಬಹುದು ಎಂಬ ಆತಂಕವನ್ನು ಅವರು ನಿರಾಕರಿಸಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಗೆ ವಿಶೇಷ ಸಂದರ್ಶನ ನೀಡಿರುವ ಅವರು ,‘ಸೇನೆಯ ಆಧುನೀಕರಣಕ್ಕೆ ಅಗತ್ಯವಿರುವ ಅನುದಾನವನ್ನು ಸರ್ಕಾರ ಒದಗಿಸಿದೆ’ ಎಂದು ಹೇಳಿದರು.

‘ವಿವಿಧ ಯುದ್ಧೋಪಕರಣ ಸೇರಿದಂತೆ ಅಗತ್ಯ ಸಾಮಗ್ರಿಗಳ ಪೂರೈಕೆಗಾಗಿಕಳೆದ ಹಣಕಾಸು ವರ್ಷದಲ್ಲಿ ₹ 21,000 ಕೋಟಿ ಮೊತ್ತದ 59 ಗುತ್ತಿಗೆಗಳಿಗೆ ಅನುಮೋದನೆ ನೀಡಲಾಗಿದೆ. ಇತರ ಖರೀದಿ ಪ್ರಕ್ರಿಯೆಗೆ ಅನುದಾನ ಕೋರಿ ಪ್ರಸ್ತಾವಗಳನ್ನು ಸಲ್ಲಿಸಲಾಗಿದೆ’ ಎಂದರು.

‘ಕ್ವಾಡ್‌ ಎಂಬುದು ಮಿಲಿಟರಿ ಮೈತ್ರಿಯಲ್ಲ’: ಕ್ವಾಡ್‌ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಇದು ಮಿಲಿಟರಿ ಶಕ್ತಿ ಬಳಕೆಗಾಗಿ ಮಾಡಿಕೊಂಡಿರುವ ಮೈತ್ರಿ ಅಲ್ಲ. ಈ ಬಗ್ಗೆ ಕೆಲವು ರಾಷ್ಟ್ರಗಳು ಭಯ ಹುಟ್ಟಿಸುವ ಕಾರ್ಯದಲ್ಲಿ ತೊಡಗಿವೆ‘ ಎಂದು ಪ್ರತಿಕ್ರಿಯಿಸಿದರು.

‘ಇಂಡೊ–ಪೆಸಿಫಿಕ್‌ ಪ್ರದೇಶ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು, ಪ್ರಾದೇಶಿಕ ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ ರಚಿಸಿಕೊಂಡಿರುವ ಬಹುಪಕ್ಷೀಯ ಗುಂಪು ಇದು’ ಎಂದೂ ಸ್ಪಷ್ಟಪಡಿಸಿದರು.

ಭಾರತ, ಅಮೆರಿಕ, ಜಪಾನ್‌ ಹಾಗೂ ಆಸ್ಟ್ರೇಲಿಯಾ ‘ಕ್ವಾಡ್‌’ನ ಸದಸ್ಯ ರಾಷ್ಟ್ರಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT