ನವದೆಹಲಿ: ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ಜಾಗತಿಕ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬರುತ್ತಿರುವ ಕಾರಣ, ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ.

ಇಂಧನ ಬಳಕೆ ಕಡಿತಗೊಳಿಸಲು ವರ್ಕ್ ಫ್ರಂ ಹೋಮ್ ರೂಢಿಸಿಕೊಳ್ಳಿ, ಇತರೆಡೆಯೂ ಇಂಧನ ಬಳಕೆ ತಗ್ಗಿಸಿ, ದೇಶವು ವಿದೇಶಿ ವಿನಿಮಯವನ್ನು ಉಳಿಸಲು ಒಂದು ವರ್ಷ ಕಾಲ ಮದುವೆಗೆ ಚಿನ್ನ ಕೊಳ್ಳುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ಜಗತ್ತು ಪೂರೈಕೆ ಸರಪಳಿಯ ಅಡಚಣೆಗೆ ತುತ್ತಾಗಿದೆ. ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಆರ್ಥಿಕತೆಯ ಅನಿಶ್ಚಿತತೆಯ ನಡುವೆ ಇಂಧನ ಸಂರಕ್ಷಣೆ ರಾಷ್ಟ್ರೀಯ ಜವಾಬ್ದಾರಿ ಎಂದು ಮೋದಿ ಹೇಳಿದ್ದಾರೆ.

'ಕೋವಿಡ್ ಅವಧಿಯಲ್ಲಿ, ನಾವು ಮನೆಯಿಂದ ಕೆಲಸ, ಆನ್ಲೈನ್ ಸಭೆಗಳು, ವಿಡಿಯೊ ಕಾನ್ಫರೆನ್ಸ್ ಅಳವಡಿಸಿಕೊಂಡಿದ್ದೆವು. ಅಂತಹ ಅನೇಕ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಿದ್ದೆವು. ಈಗ ಅವುಗಳಿಗೆ ನಾವು ಒಗ್ಗಿಕೊಂಡಿದ್ದೇವೆ’ ಎಂದು ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಹಿತಾಸಕ್ತಿಗಾಗಿ ಇಂಧನ ಉಳಿತಾಯ

ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ನಿರ್ಣಾಯಕ ಜಾಗತಿಕ ತೈಲ ಮಾರ್ಗವಾದ ಹೊರ್ಮುಜ್ ಜಲಸಂಧಿಯ ಸುತ್ತಲಿನ ಅಡೆತಡೆಗಳಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆ ಗಗನಕ್ಕೇರಿದೆ. ಯುದ್ಧಕ್ಕೂ ಮುನ್ನ ಸುಮಾರು 70 ಡಾಲರ್ ಆಗಿದ್ದ ಬ್ಯಾರಲ್ ಕಚ್ಚಾತೈಲ ಬೆಲೆ 126 ಡಾಲರ್ಗೆ ಏರಿರುವ ಈ ಸಂದರ್ಭದಲ್ಲಿ ಇಂಧನ ಉಳಿತಾಯಕ್ಕೆ ಅವರು ಮನವಿ ಮಾಡಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಉಳಿತಾಯ ಮಾಡುವಂತೆ ಮನವಿ ಮಾಡಿದ್ದಾರೆ.

‘ಪ್ರಪಂಚದಾದ್ಯಂತ ಪೆಟ್ರೋಲ್, ಡೀಸೆಲ್ ತುಂಬಾ ದುಬಾರಿಯಾಗಿವೆ. ಪೆಟ್ರೋಲ್, ಡೀಸೆಲ್ ಅನ್ನು ಸಂರಕ್ಷಿಸುವ ಮೂಲಕ ಅದರ ಖರೀದಿಗೆ ಬಳಸುವ ವಿದೇಶಿ ವಿನಿಮಯವನ್ನು ಸಹ ಉಳಿಸಬೇಕು’ ಎಂದು ಅವರು ಹೇಳಿದ್ದಾರೆ.

ಜಾಗತಿಕ ಇಂಧನ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆ ದೇಶವು ಆರ್ಥಿಕ ಒತ್ತಡವನ್ನು ಎದುರಿಸುತ್ತಿರುವ ಕಾರಣ, ವಿವೇಚನೆಯಿಂದ ತೈಲ ಬಳಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಅಲ್ಲದೇ ಭಾರತದಲ್ಲಿ ಚಿನ್ನದ ಬಳಕೆ ಬಹಳಷ್ಟು ಪ್ರಮಾಣದಲ್ಲಿದ್ದು, ಚಿನ್ನ ಖರೀದಿಗೂ ವ್ಯಾಪಕ ಪ್ರಮಾಣದ ವಿದೇಶಿ ವಿನಿಮಯ ಬೇಕಾಗುತ್ತದೆ. ಹೀಗಾಗಿ, ಒಂದು ವರ್ಷದವರೆಗೆ ಮದುವೆಗಳಿಗೆ ಚಿನ್ನ ಖರೀದಿಸಬೇಡಿ ಎಂದು ನಾನು ಜನರಿಗೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.