ನವದೆಹಲಿ (ಪಿಟಿಐ):‘ಉಪಗ್ರಹ ನಿರೋಧಕ ಕ್ಷಿಪಣಿ (ಎ–ಸ್ಯಾಟ್) ಕಾರ್ಯಾಚರಣೆಯನ್ನು ಟಿ.ವಿ ಭಾಷಣದ ಮೂಲಕ ಪ್ರಧಾನಿ ನರೇಂದ್ರ ಮೋದಿ ಬಹಿರಂಗಪಡಿಸಿದ್ದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗಿಲ್ಲ’ ಎಂದು ಚುನಾವಣಾ ಆಯೋಗವು ಹೇಳಿದೆ.

ಈ ಕಾರ್ಯಾಚರಣೆಯ ವಿವರವನ್ನು ಪ್ರಧಾನಿ ಮೋದಿ ಮಂಗಳವಾರ ಟಿ.ವಿ ಭಾಷಣದ ಮೂಲಕ ಬಹಿರಂಗಪಡಿಸಿದ್ದರು. ಇದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು. ಸಿಪಿಎಂ ಮತ್ತು ತೃಣಮೂಲ ಕಾಂಗ್ರೆಸ್ ಈ ಸಂಬಂಧ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು. ಈ ದೂರನ್ನು ಪರಿಶೀಲಿಸಲು ಆಯೋಗವು ಸಮಿತಿಯೊಂದನ್ನು ರಚಿಸಿತ್ತು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂರಾಷ್ಟ್ರೀಯ ಭದ್ರತೆಯ ವಿಚಾರಗಳನ್ನು ಬಹಿರಂಗಪಡಿಸುವ ಮುನ್ನ ಅನುಮತಿ ಪಡೆಯುವ ಅವಶ್ಯಕತೆ ಇಲ್ಲ ಎಂದು ಆಯೋಗ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.