ನವದೆಹಲಿ: ಮಹಾತ್ಮ ಗಾಂಧಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ 150 ಕಿ.ಮೀ. ಪಾದಯಾತ್ರೆ ಕೈಗೊಳ್ಳುವಂತೆ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

‘ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಮೋದಿ, ಮಹಾತ್ಮ ಗಾಂಧಿ ಅವರ ಜನ್ಮದಿನವಾದ ಅಕ್ಟೋಬರ್ 2ರಿಂದ ಪಟೇಲ್ ಜನ್ಮದಿನವಾದ ಅಕ್ಟೋಬರ್ 31ರವರೆಗಿನ ಅವಧಿಯಲ್ಲಿ ಈ ಪಾದಯಾತ್ರೆ ಸಂಘಟಿಸುವಂತೆ ಸಲಹೆ ನೀಡಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಮಂಗಳವಾರ ತಿಳಿಸಿದ್ದಾರೆ.

‘ಬಿಜೆಪಿ ಸಂಘಟನೆ ದುರ್ಬಲವಾಗಿರುವ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡುವಂತೆ ರಾಜ್ಯಸಭಾ ಸದಸ್ಯರಿಗೂ ಸೂಚಿಸಿದ್ದಾರೆ‘ ಎಂದು ಹೇಳಿದರು.

‘ಗ್ರಾಮಗಳನ್ನೇ ಗುರಿಯಾಗಿಸಿಕೊಂಡು ಈ ಪಾದಯಾತ್ರೆ ನಡೆಯಬೇಕು. ಗ್ರಾಮೀಣ ಜನರೊಂದಿಗೆ ಸಂವಾದ ನಡೆಸಬೇಕು. ಗಾಂಧಿ ವಿಚಾರಧಾರೆಗಳ ಕುರಿತು ಅವರೊಂದಿಗೆ ಚರ್ಚಿಸಬೇಕು. ಸಸಿಗಳನ್ನು ನೆಡುವುದು, ಸ್ವಚ್ಛತಾ ಕಾರ್ಯ ಹಾಗೂ ಗ್ರಾಮಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಬೆಳಕು ಚೆಲ್ಲುವಂತೆ ಪ್ರಧಾನಿ ಸೂಚಿಸಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಅರ್ಜುನರಾಮ್ ಮೇಘವಾಲ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.