ಪಟ್ನಾ: ಬಿಹಾರದ ಮಹಿಳೆಯರಿಗೆ ಈಗ ಇಬ್ಬರು ಸಹೋದರರು ಇದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆಯನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ನಂತರ ಮಾತನಾಡಿದ ಅವರು, ಆರ್ಜೆಡಿ ಆಳ್ವಿಕೆಯಲ್ಲಿ ಬಿಹಾರದ ಮಹಿಳೆಯರು ಸಾಕಷ್ಟು ಕಷ್ಟಗಳನ್ನು ಅನುಭವಿಸಿದರು. ಅವರ ಸ್ಥಿತಿ ಶೋಚನೀಯವಾಗಿತ್ತು. ಆದರೆ ನಿತೀಶ್ ಕುಮಾರ್ ಆಳ್ವಿಕೆಯಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.
.ನಮ್ಮದು ವಿಶೇಷ ತಂಡ, ಭಾರತ ಸೇರಿ ಯಾರನ್ನಾದರೂ ಸೋಲಿಸುವ ಸಾಮರ್ಥ್ಯವಿದೆ: ಪಾಕ್ ನಾಯಕ.ಯಾದಗಿರಿ: ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದು ಪರಾರಿಯಾದ ತಂದೆ.
ಬಿಹಾರದ ಮಹಿಳೆಯರಿಗೆ ಈಗ ಇಬ್ಬರು ಸಹೋದರರು ಇದ್ದೇವೆ. ನಿತೀಶ್ ಮತ್ತು ನಾನು (ಮೋದಿ). ನಾವು ನಿಮ್ಮ ಶ್ರೇಯೋಭಿವೃದ್ಧಿಗಾಗಿ ಅವಿಶ್ರಾಂತವಾಗಿ ಶ್ರಮಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್ಜೆಡಿ ಹಾಗೂ ಅದರ ಮಿತ್ರಪಕ್ಷಗಳು ರಾಜ್ಯದಲ್ಲಿ ಎಂದಿಗೂ ಅಧಿಕಾರಕ್ಕೆ ಮರಳದಂತೆ ನೋಡಿಕೊಳ್ಳಿ ಎಂದು ಮಹಿಳೆಯರಿಗೆ ಮೋದಿ ಕರೆ ನೀಡಿದ್ದಾರೆ.

ನಿತೀಶ್ ನೇತೃತ್ವದ ಸರ್ಕಾರದಡಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಮಹಿಳೆಯರು ಸುಭದ್ರವಾದ ಜೀವನ ಕಟ್ಟಿಕೊಂಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆಯಡಿ ರಾಜ್ಯದ 75 ಲಕ್ಷ ಮಹಿಳೆಯರ ಖಾತೆಗೆ ತಲಾ ₹10,000 ಜಮೆ ಆಗಿದೆ.

ಈ ಯೋಜನೆಯಡಿ ಸ್ವಯಂ ಉದ್ಯೋಗದ ಮೂಲಕ ಮಹಿಳೆಯರ ಸಬಲೀಕರಣದ ಉದ್ದೇಶ ಹೊಂದಿರುವುದಾಗಿ ಮೋದಿ ಹೇಳಿದ್ದಾರೆ.
.ಕಾಂಚನ ಅವತಾರದಲ್ಲಿ ವಂಶಿ: ದಸರಾ ಸಂಭ್ರಮ ದುಪ್ಪಟ್ಟು ಮಾಡಿದ ಮಹಾನಟಿಯರು.ಬಿಹಾರದ 75 ಲಕ್ಷ ಮಹಿಳೆಯರ ಖಾತೆಗೆ ತಲಾ ₹10,000 ಜಮೆ: ಹೊಸ ಯೋಜನೆಗೆ ಮೋದಿ ಚಾಲನೆ.ಗಮನಿಸಿ: ನವರಾತ್ರಿಯಲ್ಲಿ ಈ ಕೆಲಸಗಳನ್ನು ಮಾಡಬಾರದು ಎನ್ನುತ್ತೆ ಜ್ಯೋತಿಷ.ನವರಾತ್ರಿ 5ನೇ ದಿನ | ಸ್ಕಂದ ಮಾತೆಯ ಪೂಜೆ ಹೀಗಿರಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.