ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಥಾಯ್ಲೆಂಡ್ ಪ್ರಧಾನಿ ಪೀಟೊಂಗ್ಟಾರ್ನ್ ಶಿನವತ್ರಾಗೆ ಪ್ರಧಾನಿ ಮೋದಿ ಅಭಿನಂದನೆ

Published 18 ಆಗಸ್ಟ್ 2024, 7:31 IST
Last Updated 18 ಆಗಸ್ಟ್ 2024, 7:31 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಥಾಯ್ಲೆಂಡ್ ಪ್ರಧಾನಿಯಾಗಿ ನೇಮಕಗೊಂಡಿರುವ ಪೀಟೊಂಗ್ಟಾರ್ನ್ ಶಿನವತ್ರಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಪ್ರಕಟಿಸಿರುವ ಅವರು ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಹಾಗೂ ಪೀಟೊಂಗ್ಟಾರ್ನ್ ಶಿನವತ್ರಾ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

37 ವರ್ಷದ ಪೀಟೊಂಗ್ಟಾರ್ನ್ ಶಿನವತ್ರಾ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದಾರೆ. ಇವರ ತಂದೆ ತಕ್ಸಿನ್‌ ಶಿನವತ್ರಾ, ಅತ್ತೆ ಯಿಂಗ್ಲಿಕ್‌ ಶಿನವತ್ರಾ ಕೂಡ ಪ್ರಧಾನಿಯಾಗಿದ್ದರು.

ನೀತಿಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಥೈಲ್ಯಾಂಡ್ ಪ್ರಧಾನಿ ಶ್ರೇತ್ತಾ ಥವಿಸಿನ್ ದೋಷಿ ಎಂದು ತೀರ್ಪಿತ್ತಿರುವ ಸಾಂವಿಧಾನಿಕ ನ್ಯಾಯಾಲಯ, ಅವರನ್ನು ಹುದ್ದೆಯಿಂದ ವಜಾಗೊಳಿಸಿತ್ತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT