ನವದೆಹಲಿ: ಕೊರೊನಾ ಸೋಂಕು ತಡೆ ಹಾಗೂ ಲಾಕ್‌ಡೌನ್ ಇನ್ನಷ್ಟು ಸಡಿಲಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 16 ಮತ್ತು 17ರಂದು ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಸಂವಾದ ನಡೆಸಲಿದ್ದಾರೆ.

16ರಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಹಾಗೂ 17ರಂದು ಉಳಿದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.

ಮೋದಿ ಅವರು ಮುಖ್ಯಮಂತ್ರಿಗಳೊಂದಿಗೆ ನಡೆಸಲಿರುವ 6ನೇ ಸಭೆ ಇದಾಗಿದೆ. ಈಗಾಗಲೇ ಅನ್‌ಲಾಕ್ ಶುರುವಾಗಿದ್ದು, ಆರ್ಥಿಕ ಹಾಗೂ ವಾಣಿಜ್ಯ ಚಟುವಟಿಕೆಗಳು ಶುರುವಾಗಿವೆ. ಆದರೆ, ಮೆಟ್ರೊ, ವಿಮಾನಯಾನ ಸೇವೆ,ಪೂರ್ಣ ಪ್ರಮಾಣದಲ್ಲಿ ರೈಲು ಸಂಚಾರ ಇನ್ನೂ ಆರಂಭವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.