ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ಪುಟಿನ್‌ ನಡುವೆ ಯಾವುದೇ ವ್ಯತ್ಯಾಸವಿಲ್ಲ:‌ ಪವಾರ್

Published 14 ಏಪ್ರಿಲ್ 2024, 11:22 IST
Last Updated 14 ಏಪ್ರಿಲ್ 2024, 11:22 IST
ಅಕ್ಷರ ಗಾತ್ರ

ಸೋಲಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾದ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್‌ ಪವಾರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರು ದೇಶದ ಪ್ರಜಾಪ್ರಭುತ್ವವನ್ನು ನಿಧಾನವಾಗಿ ನಾಶಗೊಳಿಸುತ್ತಿದ್ದಾರೆ. ವಿರೋಧ ಪಕ್ಷದ ಯಾರೊಬ್ಬರ ಗೆಲುವನ್ನೂ ಮೋದಿ ಬಯಸುವುದಿಲ್ಲ. ಪ್ರಧಾನಿ ಅವರ ಈ ನಿಲುವು ಅವರ ಮತ್ತು ರಷ್ಯಾದ ಪುಟಿನ್‌ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂಬುದನ್ನು ತೋರಿಸುತ್ತದೆ’ ಎಂದು ಹೇಳಿದ್ದಾರೆ.

‘ದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿರುವುದು ಮೋದಿ ಅವರು ಸಂಸದೀಯ ಪ್ರಜಾಪ್ರಭುತ್ವವನ್ನು ನಿಧಾನವಾಗಿ ನಾಶಗೊಳಿಸುತ್ತಿದ್ದಾರೆ ಮತ್ತು ದೇಶ ನಿರಂಕುಶಾಧಿಕಾರದತ್ತ ಸಾಗುತ್ತಿದೆ ಎಂಬುದನ್ನು ತೋರಿಸುತ್ತದೆ’ ಎಂದು ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷದಷ್ಟೇ, ವಿರೋಧ ಪಕ್ಷವು ಸಮಾನ ಮಹತ್ವವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪವಾರ್‌, ‘ಪ್ರಣಾಳಿಕೆಯ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯವಲ್ಲ. ಭರವಸೆಗಳನ್ನು ನೀಡುವುದು ಬಿಜೆಪಿಯ ವಿಶೇಷತೆಯಾಗಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT