ಲಖನೌ: ವಾರಾಣಸಿಯಲ್ಲಿ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳಿಗೆ ಆದೇಶಿಸಿದರು.

ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ಮೋದಿ ಅವರು ಶುಕ್ರವಾರ ವಾರಾಣಸಿಗೆ ಆಗಮಿಸಿದ್ದರು. ಈ ವೇಳೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ವಾರಾಣಸಿ ವಿಭಾಗೀಯ ಆಯುಕ್ತರು ಹಾಗೂ ಪೊಲೀಸ್ ಆಯುಕ್ತರಿಂದ ಪ್ರಧಾನಿ ಮಾಹಿತಿ ಪಡೆದರು. ಅಪರಾಧಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ಆಗುವುದನ್ನು ಖಾತರಿ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

19 ವರ್ಷದ ಯುವತಿಯನ್ನು 22 ಮಂದಿ ಅಪಹರಿಸಿ, ಆರು ದಿನಗಳ ಕಾಲ ವಾರಾಣಸಿಯ ವಿವಿಧ ನಗರಗಳಲ್ಲಿ ಅತ್ಯಾಚಾರ ಎಸಗಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.