ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ವರ್ಷದಲ್ಲೇ ಪ್ರಗತಿ ಸಾಧಿಸಿದ ಮೋದಿ ಸರ್ಕಾರ: ಛತ್ತೀಸ್‌ಗಢ ಸಿಎಂ

Published 11 ಏಪ್ರಿಲ್ 2024, 4:03 IST
Last Updated 11 ಏಪ್ರಿಲ್ 2024, 4:03 IST
ಅಕ್ಷರ ಗಾತ್ರ

ಮಂಡ್ಲಾ( ಮಧ್ಯಪ್ರದೇಶ): ಕಾಂಗ್ರೆಸ್‌ ತನ್ನ 60 ವರ್ಷದ ಅಧಿಕಾರದ ಅವಧಿಯಲ್ಲಿ ಸಾಧಿಸಲಾಗದ ದೇಶದ ಪ್ರಗತಿಯನ್ನು ಪ್ರಧಾನಿ ಮೋದಿ ಸರ್ಕಾರ ಕೇವಲ ಒಂದು ದಶಕದಲ್ಲಿ ಸಾಧಿಸಿದೆ ಎಂದು ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹೇಳಿದ್ದಾರೆ.

ಮಧ್ಯಪ್ರದೇಶದ ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷವು ಬುಡಕಟ್ಟು ಹಾಗೂ ಆದಿವಾಸಿ ಸಮುದಾಯವನ್ನು ಕೇವಲ ವೋಟ್‌ ಬ್ಯಾಂಕ್‌ ರಾಜಕಾರಣಕ್ಕೆ ಮಾತ್ರ ಬಳಸಿಕೊಳ್ಳುತ್ತದೆ. ‘ಬೈಗಾ ಬುಡಕಟ್ಟಿನ ಸಮುದಾಯಕ್ಕೆ ಸೇರಿದ ಹಾಗೂ ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಮುಖ್ಯಮಂತ್ರಿಯಾಗಿ ಹಾಗೂ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಮಾಡುವ ಮೂಲಕ ಬಿಜೆಪಿ ಪಕ್ಷವು ಇಡೀ ಬುಡಕಟ್ಟು ಜನಾಂಗವನ್ನು ಗೌರವಿಸಿದೆ‘ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಪಕ್ಷಾಂತರ ‍ಪರ್ವ ಶುರುವಾಗಿದ್ದು, ಅನೇಕ ನಾಯಕರರು ಕಾಂಗ್ರೆಸ್‌ ತೊರೆದು ಬಿಜೆ‍ಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಕೇವಲ ಭ್ರಷ್ಟಾಚಾರದಲ್ಲಿ ತೊಡಗುವ ಮೂಲಕ 60 ವರ್ಷಗಳ ಕಾಲ ದೇಶದ ಜನತೆಗೆ ಮೋಸ ಮಾಡಿದೆ ಎಂದು ವಿಷ್ಣು ದೇವ್ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶವು ಸರ್ವತೋಮುಖ ಅಭಿವೃದ್ಧಿಯನ್ನು ಕಂಡಿದೆ. ಬಡವರು, ಯುವಕರು, ಗ್ರಾಮೀಣ ನಿವಾಸಿಗಳು ಮತ್ತು ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಐತಿಹಾಸಿಕ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಸಾಯಿ ಹೇಳಿದರು.

ಮಧ್ಯಪ್ರದೇಶದಲ್ಲಿ ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT