ನವದೆಹಲಿ: ಅಂತರರಾಷ್ಟ್ರೀಯ ಹಣಕಾಸು ನಿಧಿಯ(ಐಎಂಎಪ್) ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಅಮೆರಿಕದ ಒತ್ತಡಕ್ಕೆ ಮಣಿಯಿತು. ಐಎಂಎಫ್ನ ಇದೇ ಸಭೆಯಲ್ಲಿ, ಪಾಕಿಸ್ತಾನಕ್ಕೆ ಸಾಲ ಮಂಜೂರು ಮಾಡಲಾಗಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.

ಪಾಕಿಸ್ತಾನಕ್ಕೆ ಹಣಕಾಸು ನೆರವು ನೀಡಿರುವ ಬಗ್ಗೆ ಐಎಂಎಫ್ ಮರುಚಿಂತನೆ ಮಾಡಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒತ್ತಾಯಿಸಿದ ಮಾರನೇ ದಿನವೇ, ಕಾಂಗ್ರೆಸ್ ಈ ಆರೋಪ ಮಾಡಿದೆ.

‘ಪಾಕಿಸ್ತಾನಕ್ಕೆ ಸಾಲ ನೀಡಿರುವುದಕ್ಕೆ ಮೇ 9ರಂದು ಅನುಮೋದನೆ ನೀಡಿದ ವಿಚಾರವಾಗಿ ಸಚಿವ ರಾಜನಾಥ್ ಸಿಂಗ್ ಐಎಂಎಫ್ ಅನ್ನು ಈಗ ಟೀಕಿಸುತ್ತಿದ್ದಾರೆ. ಈಗ ಸರ್ಕಾರ ಎಚ್ಚೆತ್ತುಕೊಂಡಿದೆ. ಆದರೆ, ಇಂತಹ ಸಾಧ್ಯತೆ ಬಗ್ಗೆ ಏಪ್ರಿಲ್ 29ರಂದೇ ಕಾಂಗ್ರೆಸ್ ಪಕ್ಷವು ಸರ್ಕಾರವನ್ನು ಎಚ್ಚರಿಸಿತ್ತು. ಪಾಕಿಸ್ತಾನಕ್ಕೆ ಸಾಲ ನೀಡುವುದನ್ನು ಭಾರತ ವಿರೋಧಿಸಬೇಕು ಎಂದೂ ಹೇಳಿತ್ತು’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

‘ಮೇ 9ರ ಸಭೆಯಿಂದ ಭಾರತ ದೂರ ಉಳಿಯಿತು. ಅದೊಂದೇ ಭಾರತದ ಮುಂದಿದ್ದ ಆಯ್ಕೆಯಾಗಿತ್ತು ಎಂದು ಮೋದಿ ಸರ್ಕಾರದ ಬೆಂಬಲಿಗರು, ಸಮರ್ಥಕರು ವಾದಿಸುತ್ತಿದ್ದಾರೆ. ಇದು ಸುಳ್ಳು. ಐಎಂಎಫ್ ಕಾರ್ಯಕಾರಿ ಮಂಡಳಿ ಸಭೆಯಲ್ಲಿ, ವಿರೋಧ ವ್ಯಕ್ತಪಡಿಸುವುದಕ್ಕೆ ಅವಕಾಶ ಇದೇ ಇದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.