ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಗಸ್ಟ್‌ನಲ್ಲಿ ನರೇಂದ್ರ ಮೋದಿ ಸರ್ಕಾರ ಪತನವಾಗಬಹುದು: ಲಾಲು ಪ್ರಸಾದ್ ಭವಿಷ್ಯ

Published 5 ಜುಲೈ 2024, 13:18 IST
Last Updated 5 ಜುಲೈ 2024, 13:18 IST
ಅಕ್ಷರ ಗಾತ್ರ

ಪಟ್ನಾ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದುರ್ಬಲವಾಗಿದೆ. ಆಗಸ್ಟ್‌ ತಿಂಗಳ ಆರಂಭದಲ್ಲಿ ಅದು ಪತನಗೊಳ್ಳಬಹುದು ಎಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಶುಕ್ರವಾರ ಹೇಳಿದ್ದಾರೆ.

ರಾಷ್ಟ್ರೀಯ ಜನತಾ ದಳದ ಸಂಸ್ಥಾಪನಾ ದಿನದಂದು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಲಾಲು ಪ್ರಸಾದ್, 'ಎಲ್ಲಾ ಪಕ್ಷದ ಕಾರ್ಯಕರ್ತರು ಸಿದ್ಧರಾಗಿರಲು ನಾನು ಮನವಿ ಮಾಡುತ್ತೇನೆ. ಏಕೆಂದರೆ ಯಾವುದೇ ಸಮಯದಲ್ಲಿ ಚುನಾವಣೆಗಳು ನಡೆಯಬಹುದು. ಮೋದಿ ಸರ್ಕಾರ ತುಂಬಾ ದುರ್ಬಲವಾಗಿದೆ. ಆಗಸ್ಟ್ ವೇಳೆಗೆ ಈ ಸರ್ಕಾರ ಪತನವಾಗಬಹುದು' ಎಂದು ಭವಿಷ್ಯ ನುಡಿದಿದ್ದಾರೆ.

ತಂದೆಯ ಮಾತುಗಳನ್ನು ಪುನರುಚ್ಚರಿಸಿದ ಲಾಲು ಪ್ರಸಾದ್ ಅವರ ಮಗ ತೇಜಸ್ವಿ ಯಾದವ್, ಬಿಹಾರದಲ್ಲಿ ಶೀಘ್ರ ವಿಧಾನಸಭಾ ಚುನಾವಣೆಯ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT