ನವದೆಹಲಿ: ಕೃಷಿ ಆದಾಯವನ್ನು ಹೆಚ್ಚಿಸಲು ಮೋದಿ ಸರ್ಕಾರ ಹಲವು ಕ್ರಮಗಳನ್ನು ತಗೆದುಕೊಳ್ಳುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವಾಣ್ ಹೇಳಿದರು.

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ‘ಕೃಷಿ ಆದಾಯವನ್ನು ಹೆಚ್ಚಿಸುವುದು ನಮ್ಮ ಮೊದಲ ಗುರಿಯಾಗಿದೆ. ಅದನ್ನು ಸಾಧಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ರೈತರ ಕಲ್ಯಾಣವೇ ನಮ್ಮ ಸರ್ಕಾರದ ಗ್ಯಾರಂಟಿಯಾಗಿದೆ’ ಎಂದರು.

ಪ್ರಧಾನಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ಮೋದಿ ಸರ್ಕಾರ ರೈತರಿಗೆ ಮಾಸಿಕ ₹6 ಸಾವಿರ ನೀಡುತ್ತಿದೆ ಎಂದು ತಿಳಿಸಿದರು.

ರೈತರ ಸಾಲಮನ್ನಾ ಮಾಡುವ ಯೋಜನೆ ಸರ್ಕಾರದ ಮುಂದಿದೆಯೇ ಎಂಬ ಸಮಾಜವಾದಿ ಪಕ್ಷದ ಸಂಸದ ಆನಂದ್ ಭದೌರಿಯಾ ಅವರ ಪ್ರಶ್ನೆಗೆ ಉತ್ತರಿಸಿದ ಚೌವಾಣ್, ‘ಕೃಷಿ ಉತ್ಪಾದನೆ ಹೆಚ್ಚಿಸಲು, ಉತ್ಪಾದನಾ ವೆಚ್ಚ ಕಡಿಮೆ ಮಾಡಲು ಮತ್ತು ಉತ್ಪಾದನೆಯನ್ನು ಸೂಕ್ತ ರೀತಿಯಲ್ಲಿ ಮಾರಾಟ ಮಾಡಲು ಸಹಾಯವಾಗುವಂತೆ ನಮ್ಮ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೃಷಿ ಸಾಲ ಹೆಚ್ಚುತ್ತಿದೆ. ಅದೇ ರೀತಿಯಲ್ಲಿ ಕೃಷಿ ಆದಾಯವು ಹೆಚ್ಚುತ್ತಿದೆ’ ಎಂದರು ಹೇಳಿದರು.

‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರಗಳ ಬೆಲೆ ಏರಿಕೆಯಾಗುತ್ತಿದೆ. ಇದರ ಹೊರೆ ರೈತರ ಮೇಲೆ ಬೀಳಬಾರದು ಎಂಬುವುದು ನಮ್ಮ ಸರ್ಕಾರ ಬದ್ಧತೆಯಾಗಿದೆ. ರೈತರ ಕಲ್ಯಾಣ ಬಿಜೆಪಿಯ ಡಿಎನ್ಎಯಲ್ಲಿ ಇದೆ’ ಎಂದು ಹೇಳಿದರು.

‘ಮೋದಿ ಸರ್ಕಾರದ ಅಡಿಯಲ್ಲಿ ಶೇ 75ಕ್ಕಿಂತ ಹೆಚ್ಚು ಸಣ್ಣ ಮತ್ತು ಅತಿ ಸಣ್ಣ ರೈತರು ಶೇ 4ರ ಬಡ್ಡಿದರದಲ್ಲಿ ಸಾಲ ಪಡೆಯುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.