ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರದ ದುರಾಡಳಿತದಿಂದ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ: ಕಾಂಗ್ರೆಸ್

Published 24 ಫೆಬ್ರುವರಿ 2024, 5:58 IST
Last Updated 24 ಫೆಬ್ರುವರಿ 2024, 5:58 IST
ಅಕ್ಷರ ಗಾತ್ರ

ನವದೆಹಲಿ: ಭಾರತವನ್ನು ಸಮೃದ್ಧಿಯ ಹಾದಿಯಲ್ಲಿ ಕೊಂಡೊಯ್ಯುವ ಬದಲು, ಪ್ರಧಾನಿಯವರ ತಪ್ಪು ನೀತಿ ಮತ್ತು ದುರಾಡಳಿತವು ದೇಶದ ಆರ್ಥಿಕ ಅಭಿವೃದ್ಧಿಯನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಆರ್ಥಿಕ ಬೆಳವಣಿಗೆ ಎಂದರೆ, ಕೃಷಿ, ಕೈಗಾರಿಕೆ ಹಾಗೂ ಸೇವಾ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸುವುದು. ಇದು ಎಲ್ಲಾ ದೇಶಗಳು ಅನುಸರಿಸುತ್ತಿರುವ ಕ್ರಮ. ಈ ದಿಸೆಯಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಸಾಧಿಸಿದ್ದ ಪ್ರಗತಿಯನ್ನು ನರೇಂದ್ರ ಮೋದಿ ಸರ್ಕಾರ ಹಿಮ್ಮುಖಗೊಳಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರತಿಪಾದಿಸಿದ್ದಾರೆ.

‘2004-05 ಮತ್ತು 2017-18ರ ನಡುವೆ ಭಾರತದಲ್ಲಿ ಕೃಷಿ ಕಾರ್ಮಿಕರ ಸಂಖ್ಯೆ 6.7 ಕೋಟಿ ಕಡಿಮೆಯಾಗಿದೆ. ಏಕೆಂದರೆ ಕಾರ್ಮಿಕರು ಕಡಿಮೆ ವೇತನದ ಕೃಷಿಯನ್ನು ತೊರೆದು ಉತ್ಪಾದನೆ ಮತ್ತು ಸೇವೆಗಳಲ್ಲಿ ಹೆಚ್ಚಿನ ವೇತನದ ಉದ್ಯೋಗಗಳನ್ನು ಮಾಡುತ್ತಿದ್ದಾರೆ. ಇದೊಂದು ಐತಿಹಾಸಿಕ ಸಾಧನೆ ಮತ್ತು ಭಾರತವನ್ನು ಮಧ್ಯಮ ಆದಾಯದ ದೇಶವನ್ನಾಗಿ ಮಾಡುವಲ್ಲಿ ಮಹತ್ವದ ಕೊಡುಗೆಯಾಗಿದೆ' ಎಂದು ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಡಾ.ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ದೇಶವು ಸಾಧಿಸಿದ ಸಾಧನೆ ಮತ್ತು ಪ್ರಗತಿ, ಪ್ರಧಾನಿ ಮೋದಿಯವರ ಅನ್ಯಾಯ ಕಾಲದ ಮೂರು ವರ್ಷಗಳಲ್ಲಿ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ರಮೇಶ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT