ನವದೆಹಲಿ: ಭಾರತಕ್ಕೆ ಮೊದಲ ಅಧಿಕೃತ ಭೇಟಿ ನೀಡಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಶ್ವೇತಭವನಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ.

ಪ್ರಧಾನಿ ಅವರೊಂದಿಗೆ ನವದೆಹಲಿಯಲ್ಲಿ ಶನಿವಾರ ರುಬಿಯೊ ಅವರು ಮಹತ್ವದ ಮಾತುಕತೆ ನಡೆಸಿದರು.

‘ಮುಂದಿನ ದಿನಗಳಲ್ಲಿ ಅಮೆರಿಕಕ್ಕೆ ಭೇಟಿ ನೀಡುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪರವಾಗಿ ಭಾರತದ ಪ್ರಧಾನಿಗೆ ರುಬಿಯೊ ಆಹ್ವಾನ ನೀಡಿದ್ದಾರೆ’ ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಸರ್ಜಿಯೊ ಗೊರ್ ತಿಳಿಸಿದ್ದಾರೆ.

ಮೋದಿ–ರುಬಿಯೊ ಅವರ ಭೇಟಿಯಲ್ಲಿ ಭಾರತ–ಅಮೆರಿಕ ದ್ವಿಪಕ್ಷೀಯ ಒಪ್ಪಂದಗಳ ಬಗ್ಗೆ ಚರ್ಚೆ ನಡೆದಿದೆ. ವಿಶೇಷವಾಗಿ ರಕ್ಷಣೆ, ವ್ಯಾಪಾರ, ಇಂಧನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಕುರಿತಂತೆ ಸಮಾಲೋಚನೆ ನಡೆದಿದೆ.

ಜಾಗತಿಕ ಶಾಂತಿ–ಸುರಕ್ಷತೆಗೆ ಆದ್ಯತೆ:

ರುಬಿಯೊ ಅವರೊಂದಿಗಿನ ಮಾತುಕತೆ ಬಗ್ಗೆ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮೋದಿ ಪೋಸ್ಟ್ ಮಾಡಿದ್ದಾರೆ.

‘ನಾವಿಬ್ಬರೂ ಭಾರತ–ಅಮೆರಿಕದ ನಡುವಿನ ಜಾಗತಿಕ ರಚನಾತ್ಮಕ ಪಾಲುದಾರಿಕೆ ಬಗ್ಗೆ ಚರ್ಚಿಸಿದ್ದೇವೆ. ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ ಮತ್ತು ಸುರಕ್ಷತೆ ವಿಚಾರಗಳಿಗೆ ಆದ್ಯತೆ ನೀಡಿದ್ದೇವೆ. ಎರಡೂ ದೇಶಗಳು ಜಗತ್ತಿನ ಒಳಿತಿಗಾಗಿ ಬಹಳ ಹತ್ತಿರದಿಂದ ಕೆಲಸ ಮಾಡುತ್ತವೆ’ ಎಂದು ಅವರು ಹೇಳಿದ್ದಾರೆ.

‘ರಕ್ಷಣೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಇಂಧನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಸುಸ್ಥಿರ ಬೆಳವಣಿಗೆ ಬಗ್ಗೆ ರುಬಿಯೊ ವಿವರಿಸಿದರು. ಜಾಗತಿಕ ಶಾಂತಿಯನ್ನು ಬೆಂಬಲಿಸುವ ಭಾರತದ ಬದ್ಧತೆ ಬಗ್ಗೆ ಪ್ರಧಾನಿ ತಿಳಿಸಿದರು’ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ರುಬಿಯೋ ಅವರ ಭೇಟಿ ಭಾರತ-ಅಮೆರಿಕದ ಜಾಗತಿಕ ರಚನಾತ್ಮಕ ಪಾಲುದಾರಿಕೆಗೆ ಬಲ ತುಂಬಿದೆ ರಣಧೀರ್ ಜೈಸ್ವಾಲ್ ಭಾರತದ ವಿದೇಶಾಂಗ ಇಲಾಖೆ ವಕ್ತಾರ

ಭಾರತ -ಅಮೆರಿಕದ ಪಾಲುದಾರಿಕೆ ಇನ್ನಷ್ಟು ಗಟ್ಟಿಯಾಗುವುದನ್ನು ಎದುರು ನೋಡುತ್ತಿದ್ದೇವೆ ಸರ್ಜಿಯೊ ಗೊರ್ ಭಾರತದಲ್ಲಿನ ಅಮೆರಿಕ ರಾಯಭಾರಿ

ಜೈಶಂಕರ್–ರುಬಿಯೊ ಚರ್ಚೆ ನಾಳೆ

ಮಾರ್ಕೊ ರುಬಿಯೊ ಅವರು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಭಾನುವಾರ ದ್ವಿಪಕ್ಷೀಯ ಸಂಬಂಧಗಳ ಕುರಿತು ವಿಸ್ತೃತ ಚರ್ಚೆ ನಡೆಸಲಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ಭಾರತ ಮತ್ತು ಅಮೆರಿಕದ ದ್ವಿಪಕ್ಷೀಯ ಸಂಬಂಧದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳನ್ನು ನಿವಾರಿಸುವ ಗುರಿಯನ್ನು ಈ ಭೇಟಿ ಹೊಂದಿದೆ.

ಇಬ್ಬರ ಭೇಟಿಯಲ್ಲಿ ಇಂಧನ, ವ್ಯಾಪಾರ, ಹೂಡಿಕೆ, ಸೂಕ್ಷ್ಮ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ ಮತ್ತು ಅಮೆರಿಕ ಪಾಲುದಾರಿಕೆ ವಿಚಾರಗಳು ಪ್ರಮುಖವಾಗಿ ಚರ್ಚೆಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಏಷ್ಯಾದಲ್ಲಿನ ಯುದ್ಧ, ಇಂಧನ ಪೂರೈಕೆ ಮತ್ತು ಆರ್ಥಿಕತೆ ಮೇಲೆ ಯುದ್ಧದ ಪರಿಣಾಮಗಳ ಕುರಿತೂ ಉಭಯ ನಾಯಕರು ಗಂಭೀರ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ.

ಐದು ವಾರಗಳ ಹಿಂದೆ ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಅಮೆರಿಕಕ್ಕೆ ಮೂರು ದಿನಗಳ ಭೇಟಿ ನೀಡಿ ಬಿಕ್ಕಟ್ಟು ಸುಧಾರಣೆ ಪ್ರಯತ್ನ ಮಾಡಿದ್ದರು. ಅದಾದ ಐದು ವಾರಗಳ ನಂತರ ರುಬಿಯೊ ಅವರು ಭಾರತಕ್ಕೆ ಆಗಮಿಸಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ನಡೆಯುವ ಕ್ವಾಡ್ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲೂ ರುಬಿಯೊ ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.