ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ ಕಿ ಚೀನೀ ಗ್ಯಾರಂಟಿ: ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

Published : 20 ಮಾರ್ಚ್ 2024, 23:42 IST
Last Updated : 20 ಮಾರ್ಚ್ 2024, 23:42 IST
ಫಾಲೋ ಮಾಡಿ
Comments

ನವದೆಹಲಿ: ನರೇಂದ್ರ ಮೋದಿ ಸರ್ಕಾರವು ಚೀನಾದೊಂದಿಗೆ ವ್ಯವಹರಿಸುವಾಗ ದೇಶದ ಪ್ರಾದೇಶಿಕ ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆಯನ್ನು ಅಪಾಯಕ್ಕೆ ಒಡ್ಡಿದ್ದು, ನಮ್ಮದೇ ನೆಲವಾದ ಲಡಾಕ್‌ನ ಪ್ರಜೆಗಳ ಸಾಂವಿಧಾನಿಕ ಹಕ್ಕುಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಆರೋಪಿಸಿದ್ದಾರೆ.

‘ಮೋದಿ ಕಿ ಚೀನೀ ಗ್ಯಾರಂಟಿ! ಲಡಾಕ್‌ನಲ್ಲಿ ಸಂವಿಧಾನದ ಆರನೇ ಅನುಚ್ಛೇದದ ಅಡಿಯಲ್ಲಿ ಬುಡಕಟ್ಟು ಸಮುದಾಯಗಳ ರಕ್ಷಣೆಗಾಗಿ ಸಾರ್ವಜನಿಕ ಬೆಂಬಲದ ಒಗ್ಗಟ್ಟಿನ ಧ್ವನಿ ಮೊಳಗುತ್ತಿದೆ’ ಎಂದು ಅವರು ಹೇಳಿದರು.

ಈ ಬಗ್ಗೆ ‘ಎಕ್ಸ್‌’ ವೇದಿಕೆಯಲ್ಲಿ ಪೋಸ್ಟ್ ಮಾಡಿರುವ ಅವರು, ‘ಲಡಾಕ್‌ನ ಜನರಿಗೆ ಸಾಂವಿಧಾನಿಕ ಹಕ್ಕುಗಳನ್ನು ಭದ್ರಪಡಿಸುವ ‘ಮೋದಿ ಕಿ ಗ್ಯಾರಂಟಿ’ಯು ‘ಭಾರಿ ನಂಬಿಕೆ ದ್ರೋಹ’ವಾಗಿಯೇ ಉಳಿದಿದೆ. ಅದು ನಕಲಿಯಾಗಿದೆ ಮತ್ತು ಚೀನೀ ಸ್ವರೂಪದಲ್ಲಿದೆ’ ಎಂದು ಟೀಕಿಸಿದ್ದಾರೆ.

ಸಂವಿಧಾನದ ಆರನೇ ಅನುಚ್ಛೇದದ ಅಡಿಯಲ್ಲಿ ಲಡಾಕ್‌ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ಮತ್ತು ಸಾಂವಿಧಾನಿಕ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಲಡಾಕ್ ರಕ್ಷಣೆಗೆ ಮತ್ತು ಗಡಿಗಳಲ್ಲಿ ರಾಷ್ಟ್ರೀಯ ಹಿತಾಸಕ್ತಿಗಳನ್ನು ಭದ್ರಪಡಿಸಲು ಕಾಂಗ್ರೆಸ್ ಎಂದಿನಂತೆಯೇ ಬದ್ಧವಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT