ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಗ್ಯಾರಂಟಿಗೆ ಝೀರೋ ವಾರಂಟಿ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

Published 10 ಮಾರ್ಚ್ 2024, 9:21 IST
Last Updated 10 ಮಾರ್ಚ್ 2024, 9:21 IST
ಅಕ್ಷರ ಗಾತ್ರ

ಕೋಲ್ಕತ್ತ: ರಾಜ್ಯ ಬಿಜೆಪಿ ನಾಯಕರನ್ನು ಬಂಗಾಳ ವಿರೋಧಿಗಳು ಎಂದು ಕರೆದಿರುವ ತೃಣಮೂಲ ಕಾಂಗ್ರೆಸ್‌ನ ನಾಯಕ ಅಭಿಷೇಕ್ ಬ್ಯಾನರ್ಜಿ, ಮೋದಿಯವರ ಗ್ಯಾರಂಟಿಗೆ ಝೀರೋ ವಾರಂಟಿ ಎಂದು ಲೇವಡಿ ಮಾಡಿದ್ದಾರೆ.

ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ 'ಜನ ಘರ್ಜನ್ ಸಭಾ' ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯದ ಹಣವನ್ನು ತಡೆಹಿಡಿದಿರುವ ಕೇಸರಿ ಪಾಳಯಕ್ಕೆ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ‘ ಎಂದು ಗುಡುಗಿದರು.

‘ಬಿಜೆಪಿ ಮತ್ತು ಅದರ ನಾಯಕರು ಹೊರಗಿನವರಾಗಿದ್ದು, ಬಂಗಾಳ ವಿರೋಧಿಗಳಾಗಿದ್ದಾರೆ. ಅದಕ್ಕಾಗಿಯೇ ಅವರು ರಾಜ್ಯಕ್ಕೆ ನೀಡಬೇಕಾದ ಹಣವನ್ನು ತಡೆಹಿಡಿದಿದ್ದಾರೆ. ಇಷ್ಟಾದರೂ ತೃಣಮೂಲ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತಿದೆ’ ಎಂದು ಹೇಳಿದರು.

ಲೋಕಸಭಾ ಚುನಾವಣಾ ಪ್ರಚಾರಕ್ಕೆ ಇಂದು ಚಾಲನೆ ನೀಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲ್ಲ ಕ್ಷೇತ್ರಗಳಲ್ಲಿಯೂ ಗೆಲ್ಲುವ ಭರವಸೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT