ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಧಾನಿ ಮೋದಿ ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ: ಅಖಿಲೇಶ್‌ ಯಾದವ್‌

Published 26 ಮೇ 2024, 12:38 IST
Last Updated 26 ಮೇ 2024, 12:38 IST
ಅಕ್ಷರ ಗಾತ್ರ

ಬಲಿಯಾ (ಉತ್ತರ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮವಿಶ್ವಾಸ ಕಳೆದುಕೊಂಡಿದ್ದು, ಬಿಜೆಪಿಯು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದನ್ನು ಅರಿತಿರುವುದರಿಂದ ಭಾಷಣ ಮಾಡುವಾಗ ಎಡವುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಭಾನುವಾರ ಹೇಳಿದರು.

ಸಲೇಂಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪಕ್ಷದ ಅಭ್ಯರ್ಥಿ ರಾಮ್‌ ಶಂಕರ್‌ ವಿದ್ಯಾರ್ಥಿ ಪರ ಚುನಾವಣಾ ರ‍್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ‘ಕೇಂದ್ರದಲ್ಲಿ ‘ಇಂಡಿಯಾ’ ಒಕ್ಕೂಟ ಸರ್ಕಾರ ರಚಿಸಲಿದೆ ಮತ್ತು ಜೂನ್ 4ರ ನಂತರ ಕೇಂದ್ರ ಸಂಪುಟ ಮತ್ತು ಮಾಧ್ಯಮಗಳು ಬದಲಾಗಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಇಂಡಿಯಾ’ ಸರ್ಕಾರ ರಚನೆಯಾದರೆ ‘ಅಗ್ನಿವೀರ್‌’ ಯೋಜನೆಯನ್ನು ರದ್ದುಗೊಳಿಸುವುದಾಗಿ ಪುನರುಚ್ಚರಿಸಿದರು.

ಉತ್ತರ ಪ್ರದೇಶದ ಪಶ್ಚಿಮ ಭಾಗದಿಂದ ಎದ್ದಿರುವ ಜಯದ ಅಲೆಯು ಏಳನೇ ಹಂತದ ಮತದಾನದವರೆಗೂ ತಲುಪುತ್ತಿದೆ ಎಂದು ಹೇಳಿದರು.

‘ಮೋದಿ ಸರ್ಕಾರವು ಉದ್ಯಮಿಗಳ ₹25 ಲಕ್ಷ ಕೋಟಿಯ ಸಾಲ ಮನ್ನಾ ಮಾಡಿದೆ. ‘ಇಂಡಿಯಾ’ ಸರ್ಕಾರವು ರೈತರ ಸಾಲವನ್ನು ಮನ್ನಾ ಮಾಡಲಿದೆ ಮತ್ತು ಎಂಎಸ್‌ಪಿಗೆ ಕಾನೂನಿನ ಖಾತರಿ ನೀಡಲಿದೆ’ ಎಂದು ಅಖಿಲೇಶ್‌ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT