ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಯುದ್ಧ ಹಾಗೂ ಅದರಿಂದ ಆಗುತ್ತಿರುವ ತೊಂದರೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಗುರುವಾರ ಮಾತನಾಡಿದ್ದಾರೆ.

ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಮೋದಿ,‘ದೂರವಾಣಿ ಕರೆ ಮಾಡಿದ್ದ ನನ್ನ ಸ್ನೇಹಿತ ಮ್ಯಾಕ್ರನ್ ಅವರೊಂದಿಗೆ ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ಚರ್ಚಿಸಿದೆ. ಶಾಂತಿ ಮತ್ತು ಸ್ಥಿರತೆ ಸ್ಥಾಪನೆಗೆ ಸಂಬಂಧಿಸಿ ಸಹಕಾರ ಮುಂದುವರಿಸಲು ನಿರ್ಧರಿಸಿದೆವು’ ಎಂದು ಹೇಳಿದ್ದಾರೆ.

‘ಹಡಗುಗಳ ನಿರ್ಬಂಧ ರಹಿತ ಸಂಚಾರಕ್ಕೆ ಹೊರ್ಮುಜ್ ಜಲಸಂಧಿ ಮುಕ್ತವಾಗಬೇಕು ಹಾಗೂ ಅವುಗಳ ಸುರಕ್ಷತೆ ಖಾತ್ರಿಪಡಿಸಬೇಕು ಎಂಬುದು ಸೇರಿ ಹಲವು ವಿಷಯಗಳು ಕುರಿತು ಚರ್ಚಿಸಿದೆವು’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.