ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾತ್ಮ ಗಾಂಧಿ ಸ್ಮಾರಕಕ್ಕೆ ನರೇಂದ್ರ ಮೋದಿ ನಮನ

Published 9 ಜೂನ್ 2024, 2:26 IST
Last Updated 9 ಜೂನ್ 2024, 2:26 IST
ಅಕ್ಷರ ಗಾತ್ರ

ನವದೆಹಲಿ: ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.

ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನಿಯಾಗಿ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.

ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲು ಸಜ್ಜಾಗಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ನರೇಂದ್ರ ಮೋದಿ ಮತ್ತು ಅವರ ಸಚಿವ ಸಂಪುಟ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಟಿಡಿಪಿ, ಜೆಡಿಯು, ಶಿವಸೇನೆ ಸೇರಿ ಹಲವು ಮಿತ್ರಪಕ್ಷಗಳು ಸಂಪುಟದಲ್ಲಿ ಸ್ಥಾನ ಪಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT