ಕೃಷ್ಣನಗರ: 'ಪಶ್ಚಿಮ ಬಂಗಾಳ ವಿಧಾಸನಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಗುರುವಾರ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಇದು ಬದಲಾವಣೆಯ ಜನಾದೇಶವನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಕೃಷ್ಣನಗರದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 'ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಳೆದ 50 ವರ್ಷಗಳಲ್ಲಿ ಹಿಂಸಾಚಾರ ಕನಿಷ್ಠ ಮಟ್ಟಕ್ಕೆ ತಲುಪಿದೆ' ಎಂದು ಹೇಳಿದ್ದಾರೆ.

'ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಬಂದಾಗಲೆಲ್ಲಾ ಬಿಜೆಪಿಗೆ ಗೆಲುವು ಖಚಿತ' ಎಂದಿದ್ದಾರೆ.

ಶೇ 62.18ರಷ್ಟು ಮತದಾನ...

ಪಶ್ಚಿಮ ಬಂಗಾಳದಲ್ಲಿ ಮಧ್ಯಾಹ್ನ 1 ಗಂಟೆಯ ವೇಳೆಗೆ ಶೇ 62.18ರಷ್ಟು ಮತದಾನವಾಗಿದೆ.

152 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಮತದಾನದ ಮೊದಲ ಕೆಲವು ಗಂಟೆಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಹಿಂಸಾಚಾರದ ಘಟನೆ ವರದಿಯಾಗಿವೆ.
.ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಮತದಾನ ಆರಂಭ.ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸೇರಿದಂತೆ ಪ್ರಮುಖ 10 ಸುದ್ದಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.