ನವದೆಹಲಿ: ‘ಪಶ್ಚಿಮ ಬಂಗಾಳದ ಜನರು ಬಿಜೆಪಿಗೆ ಅದ್ಭುತವಾದ ಜನಾದೇಶವನ್ನು ನೀಡಿದ್ದು, ಅವರ ಕನಸು ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ನಮ್ಮ ಪಕ್ಷವು ಸಾಧ್ಯವಿರುವ ಎಲ್ಲವನ್ನೂ ಮಾಡಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಅಭೂತಪೂರ್ವ ಮುನ್ನಡೆ ಸಾಧಿಸಿರುವ ಹಿನ್ನಲೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.

‘ಈ ಚುನಾವಣೆ ಶಾಶ್ವತವಾಗಿ ನೆನಪಿನಲ್ಲಿ ಉಳಿಯಲಿದೆ. ಜನರ ಶಕ್ತಿಯೇ ಮೇಲುಗೈ ಸಾಧಿಸಿದ್ದು, ಬಿಜೆಪಿಯು ಜಯಭೇರಿ ಬಾರಿಸಿದೆ. ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದೆ’ ಎಂದು ಹೇಳಿದ್ದಾರೆ.

‘ಪಶ್ಚಿಮ ಬಂಗಾಳದ ಪ್ರತಿಯೊಬ್ಬ ವ್ಯಕ್ತಿಗೂ ನಾನು ತಲೆಬಾಗುತ್ತೇನೆ. ಅಲ್ಲಿನ ಜನರು ಬಿಜೆಪಿಗೆ ಅದ್ಭುತವಾದ ಜನಾದೇಶವನ್ನು ನೀಡಿದ್ದಾರೆ. ಜನರ ಕನಸು ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ನಮ್ಮ ಪಕ್ಷವು ಸಾಧ್ಯವಿರುವ ಎಲ್ಲವನ್ನೂ ಮಾಡಲಿದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ. ಸಮಾಜದ ಎಲ್ಲಾ ವರ್ಗದವರಿಗೆ ಸಮಾನ ಅವಕಾಶ ಮತ್ತು ಘನತೆಯ ಬದುಕನ್ನು ನೀಡುವ ಸರ್ಕಾರವನ್ನು ರಚಿಸಲಿದ್ದೇವೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.