ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಂ ಕಿಸಾನ್‌ ಯೋಜನೆಯ ಕಂತು ₹18,000 ಕೋಟಿ ಬಿಡುಗಡೆ: ಕಾಂಗ್ರೆಸ್‌ ಆಕ್ಷೇಪ

Published 15 ನವೆಂಬರ್ 2023, 11:26 IST
Last Updated 15 ನವೆಂಬರ್ 2023, 11:26 IST
ಅಕ್ಷರ ಗಾತ್ರ

ಖೂಂಟಿ/ ನವದೆಹಲಿ: ಪಿಎಂ– ಕಿಸಾನ್‌ ಯೋಜನೆಯ 15ನೇ ಕಂತು ₹18,000ಕೋಟಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಬಿಡುಗಡೆ ಮಾಡಿದ್ದಾರೆ. ಇದರಿಂದ ದೇಶದಾದ್ಯಂತ ಎಂಟು ಕೋಟಿ ರೈತರಿಗೆ ಅನುಕೂಲವಾಗಲಿದೆ.

ಜಾರ್ಖಂಡ್‌ನ ಖೂಂಟಿ ಜಿಲ್ಲೆಯಲ್ಲಿ ಜನಜಾತೀಯ ಗೌರವ್‌ ದಿವಸ ಆಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಅವರು ಬಟನ್‌ ಒತ್ತುವ ಮೂಲಕ ರೈತರ ಬ್ಯಾಂಕ್‌ ಖಾತೆಗಳಿಗೆ ಹಣವನ್ನು ವರ್ಗಾಯಿಸಿದರು.

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (ಪಿಎಂ– ಕಿಸಾನ್‌) ಯೋಜನೆಯಡಿ ಪ್ರತಿ ವರ್ಷ ₹ 6,000 ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಮೂರು ಕಂತುಗಳಲ್ಲಿ ವರ್ಗಾಯಿಸಲಾಗುವುದು. ಈಗಾಗಲೇ ಯೋಜನೆಯಡಿ ₹ 2.62 ಲಕ್ಷ ಕೋಟಿ ಹಣವನ್ನು ರೈತರಿಗೆ ವರ್ಗಾಯಿಸಲಾಗಿದೆ.

‘ಉದ್ದೇಶಪೂರ್ವಕವೇ?’: ಛತ್ತೀಸಗಢ ಮತ್ತು ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಇರುವಾಗ ಈ ಹಣ ಬಿಡುಗಡೆ ಮಾಡಿರುವುದನ್ನು ಕಾಂಗ್ರೆಸ್‌ ಪ್ರಶ್ನಿಸಿದೆ. ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆಯೇ ಎಂದು ಅಚ್ಚರಿ ವ್ಯಕ್ತಪಡಿಸಿದೆ. ಇದೇ 17ರಂದು ಮಧ್ಯಪ್ರದೇಶದಲ್ಲಿ ಒಂದೇ ಹಂತದ ಮತ್ತು ಛತ್ತೀಸಗಢದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ.

ಯೋಜನೆಯ ಆರನೇ ಕಂತನ್ನು 2020ರ ಆ. 1ರಂದು ಮತ್ತು ಒಂಬತ್ತನೇ ಕಂತನ್ನು 2021ರ ಆ. 9ರಂದು ಬಿಡುಗಡೆ ಮಾಡಲಾಗಿತ್ತು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯೋಜನೆಯ 12ನೇ ಕಂತನ್ನು ಕಳೆದ ವರ್ಷ ಅ. 17ರಂದು ಬಿಡುಗಡೆ ಮಾಡಲಾಗಿತ್ತು. 15ನೇ ಕಂತನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಎರಡು ದಿನಗಳಲ್ಲಿ ಛತ್ತೀಸಗಢ ಮತ್ತು ಮಧ್ಯಪ್ರದೇಶದಲ್ಲಿ, ಇನ್ನು 10 ದಿನಗಳಲ್ಲಿ ರಾಜಸ್ಥಾನದಲ್ಲಿ ಮತ್ತು ಇನ್ನು 15 ದಿನಗಳಲ್ಲಿ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ 15ನೇ ಕಂತು ಬಿಡುಗಡೆ ಮಾಡಲಾಗಿದೆ.  ಎಂದು ಅವರು ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಇದು ಉದ್ದೇಶಪೂರ್ವಕವೇ ಎಂದೂ ಪ್ರಶ್ನಿಸಿದ್ದಾರೆ.

ಜಾರ್ಖಂಡ್‌ನ ಖೂಂಟಿಯಲ್ಲಿ ಜನ್‌ ಜಾತೀಯ ಗೌರವ ದಿವಸ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್‌ ಮತ್ತು ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಇದ್ದಾರೆ. ಪಿಟಿಐ ಚಿತ್ರ
ಜಾರ್ಖಂಡ್‌ನ ಖೂಂಟಿಯಲ್ಲಿ ಜನ್‌ ಜಾತೀಯ ಗೌರವ ದಿವಸ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್‌ ಮತ್ತು ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಇದ್ದಾರೆ. ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT