ನವದೆಹಲಿ: ಕಚ್ಚಾತೈಲ, ನೈಸರ್ಗಿಕ ಅನಿಲ ಹಾಗೂ ಇತರ ಪೆಟ್ರೋಲಿಯಂ ಉತ್ಪನ್ನಗಳು, ಇಂಧನ ಪೂರೈಕೆ ಹಾಗೂ ರಸಗೊಬ್ಬರ ದಾಸ್ತಾನಿಗೆ ಸಂಬಂಧಿಸಿ ವಸ್ತುಸ್ಥಿತಿ ಅರಿಯಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಭೆ ನಡೆಸಿದರು.

ಅನಿಲ, ಪೆಟ್ರೋಲಿಯಂ ಉತ್ಪನ್ನಗಳು ಹಾಗೂ ರಸಗೊಬ್ಬರಗಳ ಪೂರೈಕೆ ನಿರಂತರವಾಗಿರುವುದನ್ನು ಖಾತ್ರಿಪಡಿಸಬೇಕು, ದೇಶದಾದ್ಯಂತ ಇವುಗಳ ವಿತರಣೆಯಲ್ಲೂ ತೊಂದರೆಯಾಗದಂತೆ ನೋಡಿಕೊಳ್ಳುವ ಕುರಿತು ಈ ಉನ್ನತಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ.

ಹಿರಿಯ ಸಚಿವರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳೇನು, ಕೈಗಾರಿಕೆಗಳು ಹಾಗೂ ಗ್ರಾಹಕರ ಹಿತಾಸಕ್ತಿ ಕಾಪಾಡುವುದು ಸೇರಿ ವಿವಿಧ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದೂ ತಿಳಿಸಿವೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಶಿವರಾಜ್ ಸಿಂಗ್ ಚೌಹಾಣ್, ಎಸ್.ಜೈಶಂಕರ್, ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ಪೀಯೂಷ್ ಗೋಯಲ್, ಅಶ್ವಿನಿ ವೈಷ್ಣವ್, ಸರ್ವಾನಂದ ಸೋನೊವಾಲ್, ಮನೋಹರ್ ಲಾಲ್ ಖಟ್ಟರ್, ಪ್ರಲ್ಹಾದ ಜೋಶಿ, ಕೆ.ರಾಮಮೋಹನ್ ನಾಯ್ಡು, ಹರದೀಪ್ ಸಿಂಗ್ ಪುರಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ಮೋದಿಯವರ ಪ್ರಧಾನ ಕಾರ್ಯದರ್ಶಿಗಳಾದ ಪಿ.ಕೆ.ಮಿಶ್ರಾ ಹಾಗೂ ಶಕ್ತಿಕಾಂತ ದಾಸ್ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.