ಕೇಂದ್ರದ ಜತೆ ತಿಕ್ಕಾಟ ಇಲ್ಲ: ರೇವಂತ್ ರೆಡ್ಡಿ
‘ಕೇಂದ್ರ ಸರ್ಕಾರವನ್ನು ಎದುರು ಹಾಕಿಕೊಳ್ಳುವ ಯಾವುದೇ ಉದ್ದೇಶ ನಮ್ಮ ಸರ್ಕಾರಕ್ಕೆ ಇಲ್ಲ’ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದರು. ರಾಜ್ಯ ವಿಭಜನೆಯ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಮುಸಿ ನದಿ ದಡದ ಪ್ರದೇಶಗಳ ಅಭಿವೃದ್ಧಿ ಹಾಗೂ ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ಕೇಂದ್ರ ಸರ್ಕಾರದ ನೆರವನ್ನು ಅವರು ಕೋರಿದರು. ಗುಜರಾತ್‌ನಂತೆ ತೆಲಂಗಾಣ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಒತ್ತು ನೀಡಬೇಕು ಎಂದೂ ಮನವಿ ಮಾಡಿದರು.