ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ: ಬೈಡನ್ ಜೊತೆಗಿನ ಸಭೆಯಲ್ಲಿ ಮೋದಿ

Last Updated 11 ಏಪ್ರಿಲ್ 2022, 16:23 IST
ಅಕ್ಷರ ಗಾತ್ರ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆ್ನ್‌ಸ್ಕಿ ನಡುವೆ ನೇರ ಮಾತುಕತೆಗೆ ಸೂಚಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಉಕ್ರೇನ್‌ನಲ್ಲಿನ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆಗಿನ ವರ್ಚುವಲ್ ಸಭೆಯ ಸಂದರ್ಭದಲ್ಲಿ ಪ್ರಧಾನಿಮೋದಿ ಈ ಹೇಳಿಕೆ ನೀಡಿದ್ದಾರೆ. ಉಕ್ರೇನ್‌ನ ಬುಕಾದಲ್ಲಿ ನಾಗರಿಕರ ಹತ್ಯೆಯ ಸುದ್ದಿ ವಿಶೇಷವಾಗಿ ಕಳವಳಕಾರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ವರ್ಚುವಲ್ ಮಾತುಕತೆ ನಡೆಸಿದರು.

ಉಕ್ರೇನ್ ಮೇಲಿನ ಆಕ್ರಮಣಕ್ಕಾಗಿ ರಷ್ಯಾದ ಮೇಲೆ ಆರ್ಥಿಕ ಒತ್ತಡವನ್ನು ಹೇರಲು ಅಮೆರಿಕ ಭಾರತದಿಂದ ಹೆಚ್ಚಿನ ಸಹಾಯವನ್ನು ಬಯಸುತ್ತಿರುವಾಗ ಈ ಮಾತುಕತೆ ನಡೆದಿದೆ.

ಬೈಡನ್ ಮತ್ತು ಮೋದಿ ಇಬ್ಬರೂ ಉಕ್ರೇನ್‌ನಲ್ಲಿ ವಿಶೇಷವಾಗಿ ಬುಕಾದಲ್ಲಿ ಅನೇಕ ನಾಗರಿಕರನ್ನು ಕೊಲ್ಲಲ್ಪಟ್ಟ ವಿನಾಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದೇವೇಳೆ, ಭಾರತದಿಂದ ರಷ್ಯಾದ ಇಂಧನ ಆಮದುಗಳಲ್ಲಿ ಏರಿಕೆಯನ್ನು ನೋಡಲು ಬಯಸುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT