ಬಕ್ಸಾರ್ (ಬಿಹಾರ): ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೆ ಧಕ್ಕೆ ತರುವುದಾಗಿ ಅಮೆರಿಕದ ಗುಪ್ತಚರ ಸಂಸ್ಥೆಯ ವೆಬ್ಸೈಟ್ಗೆ ಸಂದೇಶ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಬಿಹಾರದ ಬಕ್ಸಾರ್ ಜಿಲ್ಲೆಯ ಸಿಮ್ರಿ ಪ್ರದೇಶದ ಅಮಲ್ ಕುಮಾರ್ ತಿವಾರಿ ಎಂಬವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ.

ಅಮೆರಿಕದ ಗುಪ್ತಚರ ಸಂಸ್ಥೆಯ ವೆಬ್ಸೈಟ್ನಲ್ಲಿ ತಿವಾರಿ ಸಂದೇಶವನ್ನು ಪೋಸ್ಟ್ ಮಾಡಿರುವ ಕುರಿತು ಪೊಲೀಸರಿಗೆ ಮಾಹಿತಿ ಸಿಕ್ಕಿದೆ.

ಆರೋಪಿಯ ಮನೆಯಿಂದ ಲ್ಯಾಪ್ಟಾಪ್, ಮೊಬೈಲ್ ಫೋನ್ಗಳು, ಸೈಬರ್ ಅಪರಾಧಗಳಿಗೆ ಬಳಸುತ್ತಿದ್ದ ನಕಲಿ ಗುರುತಿನ ದಾಖಲೆಗಳು ಮತ್ತು ಇತರ ಡಿಜಿಟಲ್ ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

‘ಆರೋಪಿಯಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ನಲ್ಲಿ ವಿವಿಧ ವರ್ಚುವಲ್ ಖಾಸಗಿ ನೆಟ್ವರ್ಕ್ (ವಿಪಿಎನ್ಗಳು) ಮತ್ತು ಕೆಲ ಅಪ್ಲಿಕೇಷನ್ಗಳನ್ನು ಇನ್ಸ್ಟಾಲ್ ಮಾಡಿರುವುದು ಕಂಡುಬಂದಿದೆ. ಇವುಗಳನ್ನು ಡಾರ್ಕ್ ವೆಬ್ ಪ್ರವೇಶಿಸಲು ಬಳಸಲಾಗುತ್ತದೆ’ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

‘ಈ ಘಟನೆಯಲ್ಲಿ ತನ್ನ ಕೈವಾಡ ಇರುವುದಾಗಿ ಆರೋಪಿಯು ಒಪ್ಪಿಕೊಂಡಿದ್ದಾನೆ. ಈ ಹಿಂದೆ ಕೋಲ್ಕತ್ತ ವಿಮಾನ ನಿಲ್ದಾಣದ ವೆಬ್ಸೈಟ್ ಹ್ಯಾಕ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲೂ ಈತ ಭಾಗಿಯಾಗಿದ್ದ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಗಳು ತಿವಾರಿ ಅವರ ವಿಚಾರಣೆ ನಡೆಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.