ನವದೆಹಲಿ: ಮಹಿಳಾ ಮೀಸಲಾತಿ ಜಾರಿ ಮಾಡಲಾಗುತ್ತಿರುವುದು ಭಾರತದ ಪ್ರಜಾಪ್ರಭುತ್ವದ ಪಯಣದಲ್ಲಿ ಐತಿಹಾಸಿಕ ಕ್ಷಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಸ್ತಾಪಿತ ಮಹಿಳಾ ಮೀಸಲು ಕಾಯ್ದೆಗೆ ತಿದ್ದುಪಡಿ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ವಿಷಯದಲ್ಲಿ ರಾಜಕೀಯ ಮಾಡದಂತೆ ಎಲ್ಲ ಸಂಸದರಿಗೆ ಮನವಿ ಮಾಡಿದ್ದಾರೆ.

ಭಾರತದ ಅಭಿವೃದ್ಧಿಯನ್ನು ಕೇವಲ ಮೂಲಸೌಕರ್ಯದಿಂದ ಅಳೆಯಲಾಗುವುದಿಲ್ಲ. ಅದು ನೀತಿ ನಿರೂಪಣೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನೂ ಪ್ರತಿಬಿಂಬಿಸಬೇಕು ಎಂದಿದ್ದಾರೆ.

ಭಾರತದ ಅಭಿವೃದ್ಧಿ ಪಯಣದಲ್ಲಿ ಮಹಿಳೆಯರನ್ನು ನಿರ್ಣಯ ಕೈಗೊಳ್ಳುವುದರ ಭಾಗವಾಗಿಸುವ ಅವಕಾಶ ಸಂಸದರ ಬಳಿ ಇದೆ. ಆಡಳಿತದಲ್ಲಿ ಮಹಿಳೆಯರ ಒಳಗೊಳ್ಳುವಿಕೆ ಅಭಿವೃದ್ಧಿ ಹೊಂದಿದ ದೇಶ ನಿರ್ಮಾಣಕ್ಕೆ ಅತ್ಯವಶ್ಯಕವಾಗಿದೆ ಎಂದಿದ್ದಾರೆ.

ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ರಾಜಕೀಯ ಬಣ್ಣ ನೀಡದಿರುವ ಬಗ್ಗೆ ಸಂಸದರನ್ನು ಎಚ್ಚರಿಸಿದ ಮೋದಿ, ಕಾಯ್ದೆ ಮೂಲಕ ಮಹಿಳಾ ಮೀಸಲಾತಿ ಜಾರಿಯನ್ನು ರಾಷ್ಟ್ರೀಯ ಆದ್ಯತೆಯಾಗಿ ಪರಿಗಣಿಸಬೇಕೆ ಹೊರತು ಇಬ್ಭಾಗಿಸುವ ಅರ್ಥದಲ್ಲಲ್ಲ. ಮಹಿಳಾ ಮೀಸಲಾತಿ ಮಸೂದೆಯನ್ನು ರಾಜಕೀಕರಣಗೊಳಿಸುವ ಯಾವುದೇ ಅಗತ್ಯ ಇಲ್ಲ ಎಂದಿದ್ದಾರೆ.

ಅತ್ಯಂತ ಹಿಂದುಳಿದ ವರ್ಗದಿಂದ ಬಂದವನಾಗಿರುವ ನನ್ನ ಮೇಲೆ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುವ ಹೊಣೆ ಇದೆ ಎಂದಿದ್ದಾರೆ.

ಇದೇವೇಳೆ, ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ದೀರ್ಘಕಾಲದವರೆಗೆ ಬೆಲೆ ತೆರಬೇಕಾಗುತ್ತದೆ. ನಮ್ಮ ಹಕ್ಕುಗಳ ವಿರುದ್ಧ ನಿಂತವರು ಯಾರು ಎಂಬುದನ್ನು ಮಹಿಳೆಯರು ಎಂದಿಗೂ ಮರೆಯುವುದಿಲ್ಲ ಎಂದು ಎಚ್ಚರಿಸಿದರು.

ಮಹಿಳಾ ಮೀಸಲಾತಿ ಕಾಯ್ದೆ ಮತ್ತು ಕ್ಷೇತ್ರ ಪುನರ್ವಿಂಗಡಣೆ ಆಯೋಗ ರಚನೆಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಮೂರು ಪ್ರತ್ಯೇಕ ಮಸೂದೆಗಳನ್ನು ಮಂಡಿಸಲಾಗಿದೆ. ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಸಂವಿಧಾನಕ್ಕೆ 131ನೇ ತಿದ್ದುಪಡಿ ಮಸೂದೆ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮತ್ತು ಪ್ರಸ್ತಾಪಿತ ಮಹಿಳಾ ಮೀಸಲಾತಿಯನ್ನು ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ, ಪುದುಚೇರಿ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಗೆ ತರುವ ಉದ್ದೇಶದಿಂದ ಕೇಂದ್ರಾಡಳಿತ ಪ್ರದೇಶಗಳ ತಿದ್ದುಪಡಿ ಮಸೂದೆಯನ್ನೂ ಸಹ ಮಂಡಿಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.